ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಳಗಾವಿ ಹೊಸ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಮೊಹಮ್ಮದ್ ರೋಷನ್

Published 5 ಜುಲೈ 2024, 6:31 IST
Last Updated 5 ಜುಲೈ 2024, 6:31 IST
ಅಕ್ಷರ ಗಾತ್ರ

ಬೆಳಗಾವಿ: ಬೆಳಗಾವಿಯ ಹೊಸ ಜಿಲ್ಲಾಧಿಕಾರಿಯಾಗಿ ಮೊಹಮ್ಮದ್ ರೋಷನ್ ಅವರು ಶುಕ್ರವಾರ‌ ಅಧಿಕಾರ ವಹಿಸಿಕೊಂಡರು.

ನಿಕಟಪೂರ್ವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅಧಿಕಾರವನ್ನು ಹಸ್ತಾಂತರಿಸಿದರು.

2015ನೇ ಬ್ಯಾಚಿನ ಐ.ಎ.ಎಸ್. ಅಧಿಕಾರಿಯಾಗಿರುವ ಮೊಹಮ್ಮದ್ ರೋಷನ್, ಈ ಮುಂಚೆ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಬಿ.ಟೆಕ್ ಹಾಗೂ ಎಂ.ಬಿ.ಎ.(ಫೈನಾನ್ಸ್), ಎಂ.ಎ.(ಪಬ್ಲಿಕ್ ಪಾಲಿಸಿ) ಪದವೀಧರರಾಗಿರುವ ರೋಷನ್, ಹಾವೇರಿ ಮತ್ತು ಉತ್ತಕ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿಯೂ ಕಾರ್ಯನಿರ್ವಹಿಸಿದ್ದಾರೆ.

ಕಳೆದ ಎರಡು(5-5-2022) ವರ್ಷಗಳಿಂದ ಬೆಳಗಾವಿ ಜಿಲ್ಲಾಧಿಕಾರಿಯಾಗಿ ಆಡಳಿತದಲ್ಲಿ ಚುರುಕು ತಂದಿದ್ದ ನಿತೇಶ್ ಪಾಟೀಲ, ಕಿರು, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಇಲಾಖೆ ನಿರ್ದೇಶಕರಾಗಿ ಬೆಂಗಳೂರಿಗೆ ವರ್ಗಾವಣೆಗೊಂಡಿರುತ್ತಾರೆ.

ಬೆಳಗಾವಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಅವರು ನಿರ್ಗಮಿತ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರಿಗೆ ಶುಭಕೋರಿದರು. ಇದೇ ವೇಳೆ ನೂತನ ಜಿಲ್ಲಾಧಿಕಾರಿಗಳಿಗೆ ಹೂಗುಚ್ಚ ನೀಡಿ ಬರಮಾಡಿಕೊಂಡರು.

ಪ್ರೊಬೇಷನರಿ ಐ.ಎ.ಎಸ್. ದಿನೇಶ್ ಕುಮಾರ್ ಮೀನಾ, ಅಪರ ಜಿಲ್ಲಾಧಿಕಾರಿ ವಿಜಯಕುಮಾರ್ ಹೊನಕೇರಿ ಮತ್ತಿತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT