ಗುರುವಾರ , ಅಕ್ಟೋಬರ್ 29, 2020
22 °C

ಮರಿ ಕೋತಿಯ ರೋದನ ವೈರಲ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಗೋಕಾಕ ತಾಲ್ಲೂಕಿನ ಕೊಣ್ಣೂರದಲ್ಲಿ ವಿದ್ಯುತ್‌ ತಗುಲಿ ಮೃತಪಟ್ಟ ಮಂಗನ ಕಳೇಬರವನ್ನು ತಬ್ಬಿಕೊಂಡು ಮರಿಯು ರೋದಿಸುತ್ತಿದ್ದ ವಿಡಿಯೊ ವಾಟ್ಸ್‌ಆ್ಯಪ್ ಗ್ರೂಪ್‌ಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಸೋಮವಾರ ವೈರಲ್ ಆಗಿದೆ.

ಎರಡು ದಿನಗಳ ಹಿಂದೆ ಘಟನೆ ನಡೆದಿದೆ. ಮೃತಪಟ್ಟ ಕೋತಿಯ ಅಂತ್ಯಸಂಸ್ಕಾರಕ್ಕೆ ಸ್ಥಳೀಯರು ಸಿದ್ಧತೆ ನಡೆಸುವ ವೇಳೆ, ಮರಿಯು ಅದನ್ನು ತಬ್ಬಿಕೊಂಡು ಕಣ್ಣೀರಿಟ್ಟಿದೆ. ಬಿಗಿಯಾಗಿ ಹಿಡಿದುಕೊಂಡು ಅದು ಚಡಪಡಿಸುತ್ತಿದ್ದ ದೃಶ್ಯ ನೆರೆದಿದ್ದವರ ಮನಕಲಿತು. ಅಲ್ಲಿನ ಪವನ್ ರಜಪೂತ ಎನ್ನುವವರು ಮರಿಯನ್ನು  ಸಾಕುತ್ತಿದ್ದಾರೆ ಎಂದು ಸ್ಥಳೀಯರು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು