ಮೂಡಲಗಿ: ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಬಿ.ಎ. 4ನೇ ಸೆಮಿಸ್ಟರ್ ವಿದ್ಯಾರ್ಥಿನಿ ಲಕ್ಷ್ಮೀ ಎಂ. ರಡರಟ್ಟಿ ಅವರು ಮಲೇಷಿಯಾದಲ್ಲಿ ಜುಲೈ 29ರಿಂದ ಆಗಸ್ಟ್ 2ರವರೆಗೆ ಜರುಗುವ 10ನೇ ಏಷ್ಯನ್ ಪ್ಯಾರಾ ಟೇಕ್ವಾಂಡೊ ಚಾಂಪಿಯನ್ಷಿಪ್ ಸ್ಪರ್ಧೆಯಲ್ಲಿ ಭಾಗವಹಿಸಲು ಭಾರತದ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಲಕ್ಷ್ಮೀ ಅವರು ಈ ಹಿಂದೆ ರಾಜ್ಯಮಟ್ಟದ ಟೇಕ್ವಾಂಡೊ ಚಾಂಪಿಯನ್ಷಿಪ್ ಸ್ಪರ್ಧೆಯಲ್ಲಿ ಒಂದು ಬಾರಿ ಚಿನ್ನದ ಪದಕ, ರಾಷ್ಟ್ರಮಟ್ಟದಲ್ಲಿ ಎರಡು ಬಾರಿ ಬೆಳ್ಳಿ ಪದಕ ಪಡೆದುಕೊಂಡಿದ್ದಾರೆ. ವಿಯೆಟ್ನಾಂ ಮತ್ತು ಲೆಬೆನಾನ್ ರಾಷ್ಟ್ರದಲ್ಲಿ ಜರುಗಿದ ಅಂತರರಾಷ್ಟ್ರೀಯ ಮಟ್ಟದ ಓಪನ್ ಟೇಕ್ವಾಂಡೊ ಸ್ಪರ್ಧೆಯಲ್ಲಿ ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿದ್ದಾರೆ ಎಂದು ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವೆಂಕಟೇಶ ಸೋನವಾಲಕರ, ಉಪಾಧ್ಯಕ್ಷ ಆರ್.ಪಿ. ಸೋನವಾಲಕರ ಮತ್ತು ಪ್ರಾಚಾರ್ಯ ಎಸ್.ಎಲ್. ಚಿತ್ರಗಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.