ಮೂಡಲಗಿ: ‘ನಾಗನೂರ ಪಟ್ಟಣದ ಅಭಿವೃದ್ಧಿಗೆ ಸರ್ಕಾರದಿಂದ ಅನುದಾನ ನಿರೀಕ್ಷಿಸಲಾಗುತ್ತಿದೆ. ಆದರೆ ಸರ್ಕಾರವು ಅನುದಾನ ನೀಡುತ್ತಿಲ್ಲ’ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ತಾಲ್ಲೂಕಿನ ನಾಗನೂರ ಪಟ್ಟಣದ ಬಸ್ ನಿಲ್ದಾಣದ ಬಳಿ ಪಟ್ಟಣ ಪಂಚಾಯಿತಿ ಸಹಯೋಗದಲ್ಲಿ ನಿರ್ಮಿಸಲಾದ ಇಂದಿರಾ ಕ್ಯಾಂಟೀನ್ ಅನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಪಟ್ಟಣದ ಅಭಿವೃದ್ಧಿಗೆ ಬದ್ಧತೆಯಿಂದ ಕಾರ್ಯ ನಿರ್ವಹಿಸಲಾಗುತ್ತದೆ. ಈ ಮೊದಲು ಗ್ರಾಮ ಪಂಚಾಯಿತಿ ಇದ್ದಾಗ ಸರ್ಕಾರದ ಅನುದಾನದಡಿ ಸಾಕಷ್ಟು ಅಭಿವೃದ್ಧಿ ಮಾಡಲಾಗಿದೆ. ಆದರೆ, ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಗೆ ಮೇಲ್ದರ್ಜೆಗೆ ಏರಿಸಿದ್ದು, ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಂದ ಅನುದಾನವು ಸಮರ್ಪಕವಾಗಿ ಬಿಡುಗಡೆಯಾಗುತ್ತಿಲ್ಲ’ ಎಂದು ವಿಷಾದಿಸಿದರು.

ಮಾಜಿ ಸಚಿವ ಆರ್.ಎಂ. ಪಾಟೀಲ, ಹಿರಿಯ ಸಹಕಾರಿ ಮುಖಂಡ ಬಿ.ಆರ್.ಪಾಟೀಲ, ಪ್ರಭಾ ಶುಗರ್ಸ್ ನಿರ್ದೇಶಕ ಕೆ.ಎಸ್.ಪಾಟೀಲ, ಗಜಾನನ ಯರಗಣವಿ, ಬಿಜೆಪಿ ಮಂಡಲ ಪ್ರಕಾರ್ಯದರ್ಶಿ ಪಿ.ಎಲ್. ಬಬಲಿ, ಸುಭಾಸ ಕ್ಯಾತೆನ್ನವರ, ಮುತ್ತೆಪ್ಪ ಮುತ್ತೆನ್ನವರ, ರಮೇಶ ಬೆಳಕೂಡ, ಬಸು ಹಳಿಗೌಡರ, ಶಂಕರ ದಳವಾಯಿ, ಬಸವರಾಜ ಪಾಟೀಲ, ಮಹಾದೇವ ನಾಯಿಕ, ವೈ.ಆರ್. ಕರಬನ್ನವರ, ಬಸವಂತ ಪಡದಲ್ಲಿ, ಅಜ್ಜಪ್ಪ ಗೋಟೂರ, ಲಗಮಣ್ಣ ಗಡ್ಡಿ, ಮಹಾದೇವ ಮಾಯನ್ನವರ, ಬಲವಂತ ಕರಬನ್ನವರ, ಚಂದ್ರಶೇಖರ ಪಡದಲ್ಲಿ, ಬಿ.ಬಿ.ತಿಗಡಿ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಬಾಳನಾಯಿಕ ಕುಮರೇಶಿ, ಸದಸ್ಯರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-21-1645742843

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.