ಮೂಡಲಗಿ: ‘ಮೂಡಲಗಿ ತಾಲ್ಲೂಕು ಕೇಂದ್ರವಾಗಿ 7 ವರ್ಷಗಳಾಗಿವೆ. ಇದುವರೆಗೆ ಇಲ್ಲಿ ಭೂಮಾಪನ ಕಚೇರಿ, ಕೃಷಿ ಇಲಾಖೆ ಕಚೇರಿಗಳನ್ನು ಸ್ಥಾಪಿಸಿಲ್ಲ. ಇದರಿಂದ ಜನರು ಪರದಾಡುತ್ತಿದ್ದಾರೆ. ಕೂಡಲೇ ಎರಡೂ ಕಚೇರಿಗಳನ್ನು ಸ್ಥಾಪಿಸಬೇಕು’ ಎಂದು ಕರ್ನಾಟಕ ರಾಜ್ಯ ರೈತ ಹಾಗೂ ಹಸಿರು ಸೇನೆ ತಾಲ್ಲೂಕು ಘಟಕದ ಅಧ್ಯಕ್ಷ ಕಲ್ಮೇಶ ಗೋಕಾಕ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಈ ಕುರಿತು ಬುಧವಾರ ತಹಶೀಲ್ದಾರ್ ಶ್ರೀಶೈಲ ಗುಡಮೆ ಅವರಿಗೆ ಮನವಿ ಸಲ್ಲಿಸಿದ ಅವರು, ಎರಡು ಇಲಾಖೆಗಳಿಗೆ ಸಂಬಂಧಿಸಿದ ಕೆಲಸಕ್ಕೆ ರೈತರು ಮತ್ತು ಸಾರ್ವಜನಿಕರು ಗೋಕಾಕಕ್ಕೆ ತೆರಳಬೇಕಾಗಿದೆ. ಇದರಿಂದ ಹಣ ಖರ್ಚು ಮತ್ತು ಇಡೀ ದಿನ ಕಳೆದು ಹೋಗುತ್ತದೆ ಎಂದಿದ್ದಾರೆ.

ಮೂಡಲಗಿಯ ಪಶು ವೈದ್ಯಕೀಯ ಆಸ್ಪತ್ರೆಯಲ್ಲಿ ಸರಿಯಾದ ಔಷಧಿಗಳ ಪೂರೈಕೆ ಇರುವದಿಲ್ಲ ಹಾಗೂ ರೈತರ ಜಾನುವಾರುಗಳಿಗೆ ಸರಿಯಾದ ಚಿಕಿತ್ಸೆ ದೊರೆಯುತ್ತಿಲ್ಲ. ಕಾಯಿಲೆ ಇರುವ ಜಾನುವಾರುಗಳನ್ನು ಆಸ್ಪತ್ರೆಗೆ ತೆಗೆದುಕೊಂಡು ಹೋಗುವ ರೈತರಿಗೆ ವೈದ್ಯರು ಔಷಧಿಗಳು ಇಲ್ಲ ಎಂದು ಖಾಸಗಿ ಔಷಧಿ ಅಂಗಡಿಗಳಿಗೆ ಕಳಿಸುತ್ತಾರೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಮೂಡಲಗಿ ತಾಲ್ಲೂಕು ಕೇಂದ್ರಕ್ಕೆ ಭೂಮಾಪನ ಕಚೇರಿ, ಕೃಷಿ ಇಲಾಖೆಯ ಕಚೇರಿ ಹಾಗೂ ಪಶು ಆಸ್ಪತ್ರೆಯಲ್ಲಿ ಔಷಧಿ ದೊರೆಯುವಂತೆ ತೀವ್ರ ಕ್ರಮ ತೆಗೆದುಕೊಳ್ಳಬೇಕು. ಇಲ್ಲವಾದರೆ ರೈತ ಸಂಘದಿಂದ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಭೀಮಶಿ ಕೋರಿಶೆಟ್ಟಿ, ಶಿವು ಗೋಕಾಕ, ಅಶೋಕ ಕೊಳವಿ, ಪ್ರವೀಣ ದಡ್ಡಗೋಳ, ಶಿವು ಬ್ಯಾಕೂಡ, ಸಿದ್ದು ಕಂಬಳಿ, ಓಂಕಾರ ಅಗಸರ ಸೇರಿದಂತೆ ರೈತರ ಯುವ ಮುಖಂಡರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-21-265728366

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.