ಮೂಡಲಗಿ: ‘ಪ್ರಧಾನಮಂತ್ರಿ ಗ್ರಾಮೀಣ ಸಡಕ ಯೋಜನೆ ಅಡಿಯಲ್ಲಿ ಅರಭಾವಿ ಕ್ಷೇತ್ರದ ಮೂರು ಹೊಸ ರಸ್ತೆ ಕಾಮಗಾರಿಗಳಿಗಾಗಿ ₹7.88 ಕೋಟಿ ಅನುದಾನ ಮಂಜೂರಾಗಿದೆ’ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶೀಘ್ರದಲ್ಲಿಯೇ ರಸ್ತೆ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಗುವುದು. ಅರಭಾವಿ- ಸಂಗನಕೇರಿಯಿಂದ ಫಾರ್ಮಮಡ್ಡಿಯವರೆಗಿನ 2.1 ಕಿ.ಮೀ ರಸ್ತೆ ಕಾಮಗಾರಿಗೆ ₹1.60 ಕೋಟಿ, ಶಿವಾಪುರ(ಹ) ದಿಂದ ಮಹಾಲಿಂಗಪುರ ವರೆಗಿನ 3.48 ಕಿ.ಮೀ. ರಸ್ತೆ ಕಾಮಗಾರಿಗೆ ₹3.16 ಕೋಟಿ ಮತ್ತು ರಾಜಾಪುರದಿಂದ ಕಲ್ಲೊಳ್ಳಿ ವರೆಗಿನ 5.11 ಕಿ.ಮೀ. ರಸ್ತೆ ಕಾಮಗಾರಿಗೆ ₹3.12 ಕೋಟಿ ರೂಪಾಯಿ ಅನುದಾನ ಮಂಜೂರಾಗಿದೆ ಎಂದು ತಿಳಿಸಿದ್ದಾರೆ.

ಅರಭಾವಿ ಕ್ಷೇತ್ರದಲ್ಲಿ ರಸ್ತೆಗಳ ಸುಧಾರಣೆಗಾಗಿ ಸರ್ಕಾರದಿಂದ ಅನುದಾನ ಮಂಜೂರಾತಿ ನೀಡಲು ನನ್ನೊಂದಿಗೆ ಕೈ ಜೋಡಿಸಿದ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿಯವರ ಕಾರ್ಯಕ್ಕೆ ಅಭಿನಂದಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-21-308188685

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.