ಬುಧವಾರ, ಅಕ್ಟೋಬರ್ 28, 2020
24 °C

ಮುಂಜಾನೆ ಮಂಜು, ಮಧ್ಯಾಹ್ನ ಸುಡು ಬಿಸಿಲು!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ನಗರದಾದ್ಯಂತ ಗುರುವಾರ ಮುಂಜಾನೆ ದಟ್ಟ ಮಂಜು ಆವರಿಸಿತ್ತು. ಇದರಿಂದಾಗಿ ಬೆಳಗಾವಿಯು ‘ಮಂಜುಗಾವಿ’ಯಂತಾಗಿತ್ತು!

ಸಮೀಪದಲ್ಲಿ ಇರುವವರೂ ಕಾಣಿಸದಷ್ಟು ರೀತಿಯಲ್ಲಿ ಮಂಜು ಸುರಿಯುತ್ತಿತ್ತು. ಇದರಿಂದಾಗಿ ವಾಹನಗಳು ದೀಪ ಹಾಕಿಕೊಂಡು ಸಂಚರಿಸುತ್ತಿದ್ದುದು ಕಂಡು ಬಂತು. ಭಾರಿ ಚಳಿಯ ವಾತಾವರಣ ಸೃಷ್ಟಿಯಾಗಿತ್ತು. ಬೆಳಿಗ್ಗೆ 8 ಗಂಟೆಯಾದರೂ ತಿಳಿಯಾಗಿರಲಿಲ್ಲ. ಮೋಡಗಳ ಮರೆಯಿಂದ ಮಂಜನ್ನು ಸೀಳಿಕೊಂಡು  ಹೊರಬರಲು ಸೂರ್ಯನ ಕಿರಣಗಳು ತವಕಿಸುತ್ತಿದ್ದ ದೃಶ್ಯಗಳು ಅಲ್ಲಲ್ಲಿ ಕಾಣಸಿಕ್ಕವು. ಇದು ನೋಡುಗರಿಗೆ ಮುದ ನೀಡಿತು.

ಮಧ್ಯಾಹ್ನವಾಗುತ್ತಿದ್ದಂತೆಯೇ ಸುಡು ಬಿಸಿಲಿನ ವಾತಾವರಣವಿತ್ತು. ಸಂಜೆ ನಂತರ ಮೋಡ ಕವಿದ ವಾತಾವರಣ ನಿರ್ಮಾಣವಾಯಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.