ಬೆಳಗಾವಿ: ಹುಕ್ಕೇರಿ ತಾಲ್ಲೂಕಿನ ಬೆಲ್ಲದ ಬಾಗೇವಾಡಿ ಬಳಿ ಆಂಬುಲೆನ್ಸ್ ಹಾಗೂ ದ್ವಿಚಕ್ರವಾಹನದ ನಡುವೆ ಶುಕ್ರವಾರ ಸಂಭವಿಸಿದ ಅಪಘಾತದಲ್ಲಿ ಕೋವಿಡ್–19 ಸೋಂಕಿರ ಹಾಗೂ ಸವಾರ ಸಾವಿಗೀಡಾದರು.

ಮಹಾರಾಷ್ಟ್ರದ ಜತ್ತ ತಾಲ್ಲೂಕಿನ ಸಿಂದೂರ ಗ್ರಾಮದ 51 ವರ್ಷದ ಸೋಂಕಿತ ವ್ಯಕ್ತಿಯನ್ನು ಅಥಣಿಯ ಖಾಸಗಿ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ನಗರಕ್ಕೆ ಕರೆತರಲಾಗುತ್ತಿತ್ತು. ಈ ವೇಳೆ ಹುಕ್ಕೇರಿ–ಅಥಣಿ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಮೃತ ಸವಾರರನ್ನು ರಬಕವಿಯ ಸಾಗರ ಮಲ್ಲಪ್ಪ ದೊಡವಾಡ (18) ಎಂದು ಗುರುತಿಸಲಾಗಿದೆ. ಹಿಂಬದಿ ಸವಾರ ಗೋಪಾಲ ಅಣ್ಣಪ್ಪ ಮೂಲಿಮನಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು.

ಹುಕ್ಕೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.