ಬೆಳಗಾವಿ: ‘ಉತ್ತರ ಕರ್ನಾಟಕದವರು ಮುಂಬೈ ಸೇರಿದಂತೆ ಮಹಾರಾಷ್ಟ್ರದ ವಿವಿಧೆಡೆ ವ್ಯಾಪಾರ ವಹಿವಾಟಿಗೆ ಹೋಗುತ್ತಾರೆ. ಹಾಗಾಗಿ ಎರಡೂ ರಾಜ್ಯ ಸರ್ಕಾರಗಳು ಬಿಗಿ ಕ್ರಮ ಕೈಗೊಂಡು, ಕರ್ನಾಟಕ–ಮಹಾರಾಷ್ಟ್ರದ ಮಧ್ಯೆ ಬಸ್ಗಳನ್ನು ಓಡಿಸಬೇಕು’ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದರು.

ಉಭಯ ರಾಜ್ಯಗಳ ಮಧ್ಯೆ ಬಸ್ ಸಂಚಾರ ಸ್ಥಗಿತಗೊಂಡ ಕುರಿತು ಭಾನುವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಈ ವಿಚಾರದಲ್ಲಿ ಸರ್ಕಾರ ಕೈಕಟ್ಟಿ ಕುಳಿತುಕೊಳ್ಳುವುದು ಸರಿಯಲ್ಲ. ಬದಲಿಗೆ, ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು’ ಎಂದರು.

‘ಕರ್ನಾಟಕ, ಮಹಾರಾಷ್ಟ್ರ ಬೇರೆ ಬೇರೆ ಅಲ್ಲ. ಕರ್ನಾಟಕದಲ್ಲಿರುವ ಮರಾಠ ಸಮುದಾಯದವರೂ ಕನ್ನಡಿಗರೇ ಆಗಿದ್ದಾರೆ. ಇಲ್ಲಿ ಭಾಷೆ ಹೆಸರಿನಲ್ಲಿ ಗಲಾಟೆಯಾಗಿಲ್ಲ. 2011ರಲ್ಲಿ ಬೆಳಗಾವಿಯಲ್ಲಿ ವಿಶ್ವ ಕನ್ನಡ ಸಮ್ಮೇಳನ ಯಶಸ್ವಿಯಾಗಿಸಿದ್ದು ಹೆಚ್ಚಾಗಿ ಮರಾಠಿಗರೇ. ಹಿಂದಿನಿಂದಲೂ ಕೆಲವು ಕಿಡಿಗೇಡಿಗಳು ಭಾಷೆ ಹೆಸರಿನಲ್ಲಿ ಇಲ್ಲಿ ಗಲಾಟೆ ಎಬ್ಬಿಸುತ್ತಿದ್ದಾರೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.