ಮಂಗಳವಾರ, ಮಾರ್ಚ್ 21, 2023
28 °C

ರೈಲು ನಿಲ್ದಾಣ ಅಭಿವೃದ್ಧಿ: ವರ್ಷಾಂತ್ಯಕ್ಕೆ ಕಾಮಗಾರಿ ಪೂರ್ಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಇಲ್ಲಿನ ರೈಲು ನಿಲ್ದಾಣದಲ್ಲಿ ಪ್ರಗತಿಯಲ್ಲಿರುವ ಅಭಿವೃದ್ಧಿ ಕಾಮಗಾರಿಗಳನ್ನು ಸಂಸದೆ ಮಂಗಲಾ ಸುರೇಶ ಅಂಗಡಿ ಸೋಮವಾರ ವೀಕ್ಷಿಸಿದರು.

‘ನಿಲ್ದಾಣದ ಸರ್ವಾಂಗೀಣ ಅಭಿವೃದ್ಧಿಗೆ ₹ 90 ಕೋಟಿ ದೊರೆತಿದೆ. ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಬೇಕು. ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ದಿವಂಗತ ಸುರೇಶ ಅಂಗಡಿ ಅವರು ನಿಲ್ದಾಣವನ್ನು ಅತ್ಯಾಧುನಿಕವಾಗಿ ರೂಪಿಸುವ ಕನಸು ಕಂಡಿದ್ದರು. ಅದರಂತೆ ಉನ್ನತೀಕರಣಕ್ಕಾಗಿ ಅನುಮೋದನೆ ಸಿಗುವಂತೆ ಮಾಡಿದ್ದರು’ ಎಂದು ಹೇಳಿದರು.

‘ವರ್ಷಾಂತ್ಯಕ್ಕೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲ ದೊರೆಯಲಿದೆ’ ಎಂದು ತಿಳಿಸಿದರು.

ಮುಖ್ಯ ಪ್ರವೇಶ ದ್ವಾರ, 2ನೇ ಪ್ರವೇಶ ದ್ವಾರ, ಕೋಚಿಂಗ್ ಡಿಪೊ, ಪಾದಚಾರಿ ಮಾರ್ಗಗಳು ಮೊದಲಾದ ಕಾಮಗಾರಿಗಳನ್ನು ಪರಿಶೀಲಿಸಿದರು.

ಶಾಸಕರಾದ ಅಭಯ ಪಾಟೀಲ ಹಾಗೂ ಅನಿಲ ಬೆನಕೆ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.