ಬುಧವಾರ, ಮಾರ್ಚ್ 22, 2023
19 °C

ಕಾಮಗಾರಿ ಚುರುಕುಗೊಳಿಸಲು ಸಂಸದೆ ಮಂಗಲಾ ಅಂಗಡಿ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ನಗರದ ರೈಲು ನಿಲ್ದಾಣದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ಚುರುಕುಗೊಳಿಸಬೇಕು ಎಂದು ಸಂಸದೆ ಮಂಗಲಾ ಸುರೇಶ ಅಂಗಡಿ ಅವರು ಅಧಿಕಾರಿಗಳಿಗೆ ಗುರುವಾರ ಸೂಚಿಸಿದರು.

ರೈಲ್ವೆ ವಿಕಾಸ ನಿಗಮ ನಿಯಮಿತ (ಆರ್‌ವಿಎನ್ಎಲ್‌) ಅಧಿಕಾರಿಗಳೊಂದಿಗೆ ತಮ್ಮ ಗೃಹ ಕಚೇರಿಯಲ್ಲಿ ಚರ್ಚಿಸಿದರು.

‘ಕೇಂದ್ರ ನಿಲ್ದಾಣದ ಸರ್ವಾಂಗೀಣ ಅಭಿವೃದ್ಧಿಗೆ ₹ 190 ಕೋಟಿ ದೊರೆತಿದೆ. ಕಾಮಗಾರಿ ಪೂರ್ಣಗೊಳಿಸಿ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಬೇಕು’ ಎಂದರು.

‘ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ದಿವಂಗತ ಸುರೇಶ ಅಂಗಡಿ ಅವರು ನಿಲ್ದಾಣವನ್ನು ಅತ್ಯಾಧುನಿಕವಾಗಿ ರೂಪಿಸುವ ಕನಸು ಕಂಡಿದ್ದರು. ಅದರಂತೆ ಉನ್ನತ್ತಿಕರಣಕ್ಕಾಗಿ ಅನುಮೋದನೆ ಪಡೆದಿದ್ದರು’ ಎಂದು ಸ್ಮರಿಸಿದರು.

ಆರ್‌ವಿಎನ್‌ಎಲ್ ಪ್ರಧಾನ ವ್ಯವಸ್ಥಾಪಕ ಅರುಣಕುಮಾರ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು