ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಡಲೆ ಕಾಳು ಖರೀದಿ ಕೇಂದ್ರ ಸ್ಥಾಪನೆ; ₹ 4,620 ದರ ನಿಗದಿ

Last Updated 13 ಮೇ 2019, 15:28 IST
ಅಕ್ಷರ ಗಾತ್ರ

ಬೆಳಗಾವಿ: ಹಿಂಗಾರು ಹಂಗಾಮಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ. ಗುಣಮಟ್ಟದ ಕಡಲೆಕಾಳು ಉತ್ಪನ್ನವನ್ನು ಪ್ರತಿ ಕ್ವಿಂಟಾಲ್‌ಗೆ ₹ 4,620 ರಂತೆ ಬೆಳಗಾವಿ ಜಿಲ್ಲೆಯ ರೈತರಿಂದ ಮಾತ್ರ ಖರೀದಿಸಲು ವಿವಿಧೆಡೆ ಕೇಂದ್ರಗಳನ್ನು ತೆರೆಯಲಾಗಿದೆ.

ಅಥಣಿ ತಾಲ್ಲೂಕಿನ ತೆಲಸಂಗ, ರಾಮದುರ್ಗ ತಾಲ್ಲೂಕಿನ ಹುಲಕುಂದ, ಸವದತ್ತಿ ತಾಲ್ಲೂಕಿನ ಹಂಚಿನಾಳ, ಬೈಲಹೊಂಗಲ ತಾಲ್ಲೂಕಿನ ದೊಡವಾಡ, ರಾಯಬಾಗ ತಾಲ್ಲೂಕಿನ ಕುಡಚಿ ಹಾಗೂ ಹುಕ್ಕೇರಿ ತಾಲ್ಲೂಕಿನ ಸಂಕೇಶ್ವರದಲ್ಲಿ ಖರೀದಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

ಅಗತ್ಯವಿರುವ ದಾಖಲೆಗಳು: ಆಧಾರ ಗುರುತಿನ ಚೀಟಿಯ ಮೂಲ ಪ್ರತಿ ಹಾಗೂ ಅದರ ನಕಲು ಪ್ರತಿ, 2018–19ನೇ ಸಾಲಿನ ಪಹಣಿ ಪತ್ರ ಮತ್ತು ಸದರಿ ಪಹಣಿ ಪತ್ರದಲ್ಲಿ ಕಡಲೆಕಾಳು ಬೆಳೆದಿರುವ ಬಗ್ಗೆ ನಮೂದಾಗಿರಬೇಕು, ಕಂದಾಯ ಇಲಾಖೆಯ ಗ್ರಾಮ ಲೆಕ್ಕಿಗರಿಂದ ಕಡಲೆಕಾಳು ಬೆಳೆದ ಬಗ್ಗೆ ಧೃಢೀಕರಣ ಪತ್ರ, ಪಹಣಿ ಪತ್ರಿಕೆಯಲ್ಲಿರುವ ಹೆಸರಿನ ರೈತರ ಆಧಾರ ಸಂಖ್ಯೆ ಜೋಡಣೆಗೊಂಡ ಬ್ಯಾಂಕ್ ಖಾತೆ ಪಾಸ್ ಪುಸ್ತಕದ ನಕಲು ಪ್ರತಿ, ಈ ದಾಖಲೆಗಳೊಂದಿಗೆ ರೈತರು ತಮ್ಮ ಹೆಸರನ್ನು ಇದೇ 28ರೊಳಗೆ ಖರೀದಿ ಕೇಂದ್ರಗಳಲ್ಲಿ ನೋಂದಾಯಿಸಿಕೊಳ್ಳಬೇಕು.

ಎಫ್.ಎ.ಕ್ಯೂ ಗುಣಮಟ್ಟ:
ಕಡಲೆಕಾಳು ಚೆನ್ನಾಗಿ ಒಣಗಿರಬೇಕು, ತೇವಾಂಶವು ಶೇ 12ಕ್ಕಿಂತ ಕಡಿಮೆ ಇರಬೇಕು, ಗುಣಮಟ್ಟದ ಗಾತ್ರ, ಬಣ್ಣ, ಆಕಾರ ಹೊಂದಿರಬೇಕು, ಗಟ್ಟಿಯಾಗಿರಬೇಕು, ಮಣ್ಣಿನಿಂದ ಬೇರ್ಪಡಿಸಲ್ಪಟ್ಟು ಸ್ವಚ್ಛವಾಗಿರಬೇಕು, ಸಾಣಿಗೆಯಿಂದ ಸ್ವಚ್ಛಗೊಳಿಸಿರಬೇಕು. ಕ್ರಿಮಿಕೀಟಗಳಿಂದ ಮುಕ್ತವಾಗಿರಬೇಕು.

ರೈತರಿಂದ ಪ್ರತಿ ಎಕರೆಗೆ 3 ಕ್ವಿಂಟಾಲ್‌ದಂತೆ ಗರಿಷ್ಠ 10 ಕ್ವಿಂಟಾಲ್ ಪ್ರಮಾಣದ ಕಡಲೆಕಾಳನ್ನು ಜೂನ್‌ 7ರೊಳಗೆ ಖರೀದಿಸಲಾಗುವುದು. ಸರ್ಕಾರಿ ರಜೆ ದಿನಗಳನ್ನು ಹೊರತುಪಡಿಸಿ ಉಳಿದ ದಿನಗಳಲ್ಲಿ ಬೆಳಿಗ್ಗೆ 10ರಿಂದ ಸಂಜೆ 5ರ ವರೆಗೆ ಮಾತ್ರ ಖರೀದಿಸಲಾಗುವುದು. ಬೆಳಗಾವಿ ಜಿಲ್ಲೆಯ ರೈತರು ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದು ಜಿಲ್ಲಾ ಟಾಸ್ಕ್‌ಫೋರ್ಸ ಸಂಯೋಜಕರು ಹಾಗೂ ಕೃಷಿ ಮಾರಾಟ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಶಾಖಾ ವ್ಯವಸ್ಥಾಪಕರು, ಕ.ರಾ.ಸ.ಮಾ.ಮ.ಮಂಡಳ ಶಾಖೆ, ಬೆಳಗಾವಿ. ಮೊಬೈಲ್‌ 9916024077 ಅಥಣಿ ಮೊಬೈಲ್‌ 9449864471 ಮತ್ತು ಗೋಕಾಕ ಮೊಬೈಲ್‌ 9449864445 ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT