ಬೆಳಗಾವಿ: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ವಿರುದ್ಧ ರಾಜಕೀಯವಾಗಿ ಪಿತೂರಿ ನಡೆಯುತ್ತಿದೆ. ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಮತ್ತು ಅವರ ಪತ್ನಿ ಭಾಗಿಯಾಗಿಲ್ಲ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ(ಇ.ಡಿ) ತನಿಖೆ ಮಾಡುತ್ತಿರುವ ವಿಚಾರವಾಗಿ, ಇಲ್ಲಿ ಶನಿವಾರ ಸುದ್ದಿಗಾರರಿಗೆ ಅವರು ಹೀಗೆ ಪ್ರತಿಕ್ರಿಯಿಸಿದರು.

‘ಒಂದು ಪ್ರಕರಣದ ತನಿಖೆ ಸುಧೀರ್ಘವಾಗಿ ನಡೆಯುತ್ತದೆ. ಹೀಗಿರುವಾಗ, ಈ ಪ್ರಕರಣದಲ್ಲಿ ಅಕ್ರಮ ನಡೆದಿದೆಯೇ ಅಥವಾ ಇಲ್ಲವೇ ಎಂಬುದನ್ನು ನ್ಯಾಯಾಲಯ ವಿಚಾರಣೆ ಮಾಡಬೇಕೇ ಹೊರತು, ನಾವು–ನೀವು ಅಲ್ಲ. ಇ.ಡಿ ತನಿಖೆಯನ್ನು ನಾನು ಕಂಡಿದ್ದೇನೆ. ಇದರ ಕುರಿತಾಗಿ ಹೆಚ್ಚು ಮಾತನಾಡುವುದಿಲ್ಲ’ ಎಂದರು.
.ಬಾಯಿ ಮುಚ್ಚಿಕೊಂಡಿರಿ ಎಂದ ಖರ್ಗೆ: ಬಹಿರಂಗ ಹೇಳಿಕೆ ನೀಡಲು ಸಚಿವರು ಹಿಂದೇಟು.ಬಾಯಿ ಮುಚ್ಚಿಕೊಂಡಿರಿ: ಸಚಿವರು,ಶಾಸಕರಿಗೆ ಮಲ್ಲಿಕಾರ್ಜುನ ಖರ್ಗೆ ತಾಕೀತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.