ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂಡಲಗಿ: ಭದ್ರತೆಯಲ್ಲಿ ವಿದ್ಯುನ್ಮಾನ ಮತಯಂತ್ರಗಳು 

Published 28 ಮಾರ್ಚ್ 2024, 16:08 IST
Last Updated 28 ಮಾರ್ಚ್ 2024, 16:08 IST
ಅಕ್ಷರ ಗಾತ್ರ

ಮೂಡಲಗಿ: ಲೋಕಸಭಾ ಚುನಾವಣೆಗೆ ಬಳಸುವ ವಿದ್ಯುನ್ಮಾನ ಮತಯಂತ್ರಗಳು ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯಲ್ಲಿ ಸ್ಥಾಪಿಸಿರುವ ಭದ್ರತಾ ಕೊಠಡಿಯಲ್ಲಿ ಬಿಗಿ ಭದ್ರತೆಯಲ್ಲಿ ಇರಿಸಲಾಗಿದೆ ಎಂದು ಅರಭಾವಿ ಸಹಾಯಕ ಚುನಾವಣಾಧಿಕಾರಿ ಪ್ರಭಾವತಿ ಫಕೀರಪುರ ಹೇಳಿದರು.

ಭದ್ರತಾ ಕೊಠಡಿಯಲ್ಲಿ 365 ವಿವಿ ಪ್ಯಾಟ್‌ ಮತಯಂತ್ರಗಳು, 365 ಬಿಯು ವಿದ್ಯುನ್ಮಾನ ಮತಯಂತ್ರಗಳನ್ನು ಇರಿಸಲಾಗಿದೆ ಎಂದು ತಿಳಿಸಿದರು. ಭದ್ರತಾ ಕೊಠಡಿ ಉಸ್ತುವಾರಿಯನ್ನು ಮೂಡಲಗಿಯ ಸಿಪಿಐ ಅಬ್ದುಲ್‌ ವಾಜೀದ ಪಟೇಲ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಪಿಎಸ್‌ಐ ಬಿ.ಎಸ್. ಕಂಬಾರ, ಶಿರಸ್ತೆದಾರ ಪರಶುರಾಮ ನಾಯ್ಕ ಹಾಗೂ ತಹಶೀಲ್ದಾರ್ ಮತ್ತು ಪೊಲೀಸ್‌ ಸಿಬ್ಬಂದಿಯವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT