ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಕೆಪಿಎಸ್‌ ಚುನಾವಣೆಗೆ ಅಡ್ಡಿ: ಕ್ರಮಕ್ಕೆ ಆಗ್ರಹ

ಜಿಲ್ಲಾಧಿಕಾರಿ ಕಚೇರಿ ತಲುಪಿದ ವಿವಾದ
Last Updated 23 ಜನವರಿ 2020, 12:57 IST
ಅಕ್ಷರ ಗಾತ್ರ

ಬೆಳಗಾವಿ: ‘ಮೂಡಲಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ (ಪಿಕೆಪಿಎಸ್) ಚುನಾವಣೆಗೆ ಅಡ್ಡಿಪಡಿಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ನಿಯಮಾನುಸಾರ ಚುನಾವಣೆಗೆ ಅವಕಾಶ ಕಲ್ಪಿಸಿಕೊಡಬೇಕು’ ಎಂದು ಒತ್ತಾಯಿಸಿ ಆ ಸಂಘದ ಸದಸ್ಯರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

‘ಕೆಲವರು ರಾಜಕೀಯ ದುರುದ್ದೇಶದಿಂದ ಚುನಾವಣೆಗೆ ಅಡ್ಡಿ ಮಾಡುತ್ತಿದ್ದಾರೆ. ಸಹಕಾರಿ ಸಂಘದ ಕಚೇರಿ ಎದುರು ಪ್ರತಿಭಟನೆ ನಡೆಸುವುದು, ಚುನಾವಣೆ ನಡೆಸದಂತೆ ಮೇಲಾಧಿಕಾರಿಗೆ ಮನವಿ ಸಲ್ಲಿಸುವುದು, ಚುನಾವಣಾ ಸಿಬ್ಬಂದಿಗೆ ತೊಂದರೆ ಕೊಡುವ ಕೆಲಸ ಮಾಡುತ್ತಿದ್ದಾರೆ. ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ತೆಗೆಯಲಾಗಿದೆ ಎಂದು ಕೆಲವರು ಸುಳ್ಳು ಆರೋಪ ಮಾಡುತ್ತಿದ್ದಾರೆ’ ಎಂದು ದೂರಿದರು.

‘ಸಹಕಾರಿ ಸಂಘದ ಚುನಾವಣೆಯನ್ನು ನಿಯಮಾನುಸಾರ ಮಾಡಲು ಚುನಾವಣಾಧಿಕಾರಿ ಮುಂದಾಗಿದ್ದಾರೆ. ಹಾಗಾಗಿ ಯಾವುದೇ ಕಾರಣಕ್ಕೂ ರಾಜಕೀಯ ಒತ್ತಡಕ್ಕೆ ಮಣಿಯದೆ ಚುನಾವಣಾ ಪ್ರಕ್ರಿಯೆ ನಡೆಸಬೇಕು’ ಎಂದು ಒತ್ತಾಯಿಸಿದರು.

ಸಂಘದ ಸದಸ್ಯರಾದ ಸಂತೋಷ ಸೋನವಾಲಕರ, ಸಂದೀಪ ಪಿ.ಎಸ್., ಬಸಯ್ಯ ಮಠಪತಿ, ಸುಭಾಷ ಕಡಕಬಾವಿ, ರಾಜು ಬೆಳಸಿ, ಅಡಿವೆಪ್ಪ ಕುರಬಗಟ್ಟಿ, ಶಂಕರಪ್ಪ ಹೊಸಕೋಟೆ, ಗುರಲಿಂಗ ಗೋಕಾಕ, ರುದ್ರಪ್ಪ ಬಳಿಗಾರ, ಭೀಮಶಿ ತಳವಾರ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT