ಮೂಡಲಗಿ: ‘ಕಾರ್ಮಿಕರು ಕಡ್ಡಾಯವಾಗಿ ಕಾರ್ಮಿಕ ಗುರುತಿನ ಪತ್ರವನ್ನು ಮಾಡಿಕೊಂಡು ಅದರ ಮೂಲಕ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು’ ಎಂದು ಮೂಡಲಗಿಯ ಜೆಎಂಎಫ್ಸಿ ನ್ಯಾಯಾಲಯದ ಹಿರಿಯ ಸಿವಿಲ ನ್ಯಾಯಾಧೀಶೆ ಶಾಂತಮ್ಮ ಮಲ್ಲಿಕಾರ್ಜುನ ಗೌಡ ಪಿ. ಹೇಳಿದರು.

ಮೂಡಲಗಿ ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ತಾಲ್ಲೂಕು ಕಾರ್ಮಿಕ ಇಲಾಖೆ ಸಹಯೋಗದಲ್ಲಿ ಆಚರಿಸಿದ ಅಂತರ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕಾರ್ಮಿಕರು ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು ಮತ್ತು ಬಾಲ್ಯ ವಿವಾಹ ಮಾಡಬಾರದು. ಮಾಡಿದರೆ ಕಠಿಣ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ ಎಂದು ಹೇಳಿದರು.

ತಾಲ್ಲೂಕು ಕಾರ್ಮಿಕ ಇಲಾಖೆ ನಿರೀಕ್ಷಕ ಪಾಂಡುರಂಗ ಮಾವರಕರ ಮಾತನಾಡಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರಿಗೆ ಸರ್ಕಾರದ ಪ್ರತ್ಯೇಕ ಸೌಲಭ್ಯಗಳಿವೆ. ಅಸಂಘಟಿತರಿಗೆ ಮದುವೆಗೆ ಧನ ಸಹಾಯ, ಅಪಘಾತ ಪರಿಹಾರದಂತ ಹಲವಾರ ಸೌಲಭ್ಯಗಳಿದ್ದು, ಕಾರ್ಮಿಕರು ಕಡ್ಡಾಯವಾಗಿ ನೋಂದಣಿ ಮಾಡಿಸಿ ಕಾರ್ಮಿಕ ಕಾರ್ಡ್ ಮಾಡಿಸಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಆರ್.ಆರ್. ಭಾಗೋಜಿ ಮಾತನಾಡಿದರು.

ನ್ಯಾಯವಾದಿಗಳ ಸಂಘದ ಪದಾಧಿಕಾರಿಗಳಾದ ಎಲ್.ಬಿ.ವಡೇರ, ಅನಿಲ ಕೌಜಲಗಿ, ಎಲ್.ಎಸ್. ಯಡ್ರಾಂವಿ, ಎಸ್.ವೈ.ಸಣ್ಣಕ್ಕಿ, ಆರ್.ಎಸ್. ತೋಳಮರ್ಡಿ, ಜ್ಯೋತಿ ಕುಡತೆ, ರವಿ ಸಿಮೆಂಟ್ ಪ್ರೋಡಕ್ಟ್ಸ್ ಇಂಡಸ್ಟ್ರೀಸ್ನ ಮಾಲಿಕರಾದ ಬಸವರಾಜ ಢವಳೇಶ್ವರ, ಕಾರ್ಮಿಕರ ಸಂಘದ ಅಧ್ಯಕ್ಷ ಬಸವರಾಜ ಪೋಳ, ಕಾರ್ಯದರ್ಶಿ ಸುಭಾಷ ಗೊಡ್ಯಾಗೋಳ ಅತಿಥಿಗಳಾಗಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-21-1393780937

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.