ಮೂಡಲಗಿ: ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ ನೆರವಿನೊಂದಿಗೆ ಗೋಕಾಕದ ಏಕತಾ ಫೌಂಡೇಷನ್ ಹಾಗೂ ರಬಕವಿಯ ನದಾಫ್ ಹೈಟೆಕ್ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಈಚೆಗೆ ಮೂಡಲಗಿ ವಿದ್ಯಾನಗರದ ವಾರ್ಡ್ ನಂ.14ರಲ್ಲಿ ಉಚಿತ ಕಣ್ಣು ತಪಾಸಣೆ ಹಾಗೂ ಕಣ್ಣಿನ ಶಸ್ತ್ರ ಚಿಕಿತ್ಸಾ ಶಿಬಿರ ನಡೆಯಿತು.

ಬಡ ಹಾಗೂ ವೃದ್ಧರ ನೆರವಿಗಾಗಿ ಅರಭಾವಿ ಕ್ಷೇತ್ರದಾದ್ಯಂತ ಈಗಾಗಲೇ ಹಲವು ಉಚಿತ ಕಣ್ಣು ತಪಾಸಣಾ ಶಿಬಿರಗಳನ್ನು ಆಯೋಜಿಸಲಾಗಿದ್ದು, ಈಗ ಪಟ್ಟಣದ ವಾರ್ಡ್ಗಳಲ್ಲಿ ಹಮ್ಮಿಕೊಳ್ಳಲಾಗುತ್ತಿದೆ ಎಂದು ಸಂಘಟಕರು ತಿಳಿಸಿದರು.

ಶಿಬಿರದಲ್ಲಿ ಸುಮಾರು 50ಕ್ಕೂ ಹೆಚ್ಚು ಜನ ಉಚಿತ ಕಣ್ಣು ತಪಾಸಣೆ ಮಾಡಿಸಿಕೊಂಡು 15 ಜನ ಉಚಿತ ಕಣ್ಣಿನ ಶಸ್ತ್ರಚಿಕಿತ್ಸೆಗೆ ಹೆಸರು ನೋಂದಾಯಿಸಿಕೊಂಡರು. ಶಿಬಿರದಲ್ಲಿ ಡಾ.ಸುಧೀರ ಸಾವಡಕರ, ಸೈಯದ ಮುಜಾವರ, ಸಮದ ಅತ್ತಾರ ಸೇರಿದಂತೆ ಆಶಾ ಕಾರ್ಯಕರ್ತೆಯರಾದ ಸಂಗೀತಾ ಸಣ್ಣಕ್ಕಿ, ಮಂಜುಳಾ ಢವಳೇಶ್ವರ, ರೇಣುಕಾ ಅವರಾದಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-21-922525916

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.