ಮೂಡಲಗಿ: ‘ಪಿ.ಎಂ.ಶ್ರೀ ಯೋಜನೆಯಡಿ ತಾಲ್ಲೂಕಿನಲ್ಲಿ ಕಲ್ಲೋಳಿ, ಮೆಳವಂಕಿ, ಮೂಡಲಗಿ, ಘಟಪ್ರಭಾ, ಅರಭಾವಿ, ವಡೇರಹಟ್ಟಿ, ನಾಗನೂರ ಸೇರಿದಂತೆ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ 40 ಶಾಲೆಗಳು ಆಯ್ಕೆಯಾಗಿವೆ’ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.

ತಾಲ್ಲೂಕಿನ ಕಲ್ಲೋಳಿ ಪಟ್ಟಣದ ಪಿ.ಎಂ.ಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯಲ್ಲಿ ಆಯೋಜಿಸಿದ್ದ ಶಾಲಾ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

‘ಈ ಶಾಲೆಗಳ ಅಭಿವೃದ್ಧಿಗೆ ಎರಡು ಕಂತುಗಳಲ್ಲಿ ₹6 ಕೋಟಿ, ಶಾಲಾ ಚಟುವಟಿಕೆಗಳಿಗೆ ₹5 ಕೋಟಿ ಮಂಜೂರಾಗಿದೆ. ಈಗಾಗಲೇ ಶೇ 75ರಷ್ಟು ಅನುದಾನ ಬಿಡುಗಡೆಯಾಗಿದೆ’ ಎಂದರು.

‘ಶೈಕ್ಷಣಿಕ ವ್ಯವಸ್ಥೆಯಲ್ಲಿ ಆಮೂಲಾಗ್ರ ಬದಲಾವಣೆ ತರುವ ಉದ್ದೇಶದಿಂದ ಹಾಗೂ ಸರ್ಕಾರಿ ಶಾಲೆಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ಪಿ.ಎಂ.ಶ್ರೀ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿದೆ. ಇದರಿಂದ ಗ್ರಾಮೀಣ ಬಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆಯಲಿದೆ’ ಎಂದು ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ, ಮುಖ್ಯಶಿಕ್ಷಕ ಸಿ. ಎಲ್. ಬಡಿಗೇರ. ಪ್ರಭು ಕಡಾಡಿ, ಅಡಿವೆಪ್ಪ ಕುರಬೇಟ, ಕಾಡೇಶ ಗೋರೋಶಿ, ಶಿವಾನಂದ ಹೆಬ್ಬಾಳ, ಶಿವಪ್ಪ ಬಿ. ಪಾಟೀಲ, ಸೋಮನಿಂಗ ಹಡಿಗನಾಳ, ಅಜೀತ ಚಿಕ್ಕೋಡಿ, ದಸಗೀರ ಕಮತನೂರ, ಶಂಕರ ಖಾನಗೌಡ್ರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.