ಭಾನುವಾರ, 13 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

‘ಮುಳ್ಳೂರು ಕೆರೆ ಅಭಿವೃದ್ಧಿಗೆ ₹ 1ಕೋಟಿ’

Published : 14 ಸೆಪ್ಟೆಂಬರ್ 2024, 15:29 IST
Last Updated : 14 ಸೆಪ್ಟೆಂಬರ್ 2024, 15:29 IST
ಫಾಲೋ ಮಾಡಿ
Comments

ರಾಮದುರ್ಗ: ರೈತರ ಜಮೀನುಗಳಿಗೆ ನೀರಾವರಿ ಪ್ರದೇಶದ ವಿಸ್ತರಣೆ ಮತ್ತು ಅಂತರ್ಜಲ ಹೆಚ್ಚಳಕ್ಕೆ ಸಹಕಾರಿಯಾಗಲು ತಾಲ್ಲೂಕಿನಲ್ಲಿರುವ ಕೆರೆಗಳ ಪುನಶ್ಚೇತನಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಶೀಘ್ರದಲ್ಲಿ ಅನುಮೋದನೆ ದೊರೆಯಲಿದೆ ಎಂದು ವಿಧಾನಸಭೆ ಮುಖ್ಯಸಚೇತಕ ಅಶೋಕ ಪಟ್ಟಣ ಹೇಳಿದರು.

ಶನಿವಾರ ತಾಲ್ಲೂಕಿನ ಮುಳ್ಳೂರ ಗ್ರಾಮದಲ್ಲಿ ₹ 1ಕೋಟಿ ವೆಚ್ಚದಲ್ಲಿ ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯ ಇಂಗುಕೆರೆಯನ್ನು ಅಭಿವೃದ್ಧಿ ಪಡಿಸುವ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ಮುಳ್ಳೂರ ಕೆರೆ ಅಭಿವೃದ್ಧಿಯಿಂದ ಸುಮಾರು 55 ಹೆಕ್ಟರ್ ಪ್ರದೇಶದ ನೀರಾವರಿಗೆ ಅನುಕೂಲವಾಗಲಿದೆ. ರೈತರು ನೀರನ್ನು ಮಿತವಾಗಿ ಬಳಸಬೇಕು ಎಂದು ಸಲಹೆ ನೀಡಿದರು.

ಸರ್ಕಾರದ ಅನುದಾನ ಸಮರ್ಪಕ ಬಳಕೆಯಾಗಬೇಕು. ಕಾಮಗಾರಿ ಗುಣಮಟ್ಟದಲ್ಲಿ ಯಾವುದೇ ರಾಜಿ ಇಲ್ಲ. ಕಾಮಗಾರಿ ಕಳಪೆಯಾದರೆ ಸಂಬಂಧಿಸಿದ ಅಧಿಕಾರಿ ಮತ್ತು ಗುತ್ತಿಗೆದಾರರ ಮೇಲೆ ಕ್ರಮ ಅನಿವಾರ್ಯವಾಗಲಿದೆ. ಅದಕ್ಕೆ ಅವಕಾಶ ನೀಡಬೇಡಿ ಎಂದು ಹೇಳಿದರು.

ಸಣ್ಣ ನೀರಾವರಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಲಕ್ಷ್ಮಣ ಬಂಡಿವಡ್ಡರ ಮಾತನಾಡಿ, ತಾಲ್ಲೂಕಿನಲ್ಲಿ ಒಟ್ಟು 28 ಕೆರೆಗಳಿವೆ. ಈ ಪೈಕಿ 19 ಕೆರೆಗಳನ್ನು ಬೃಹತ್ ನೀರಾವರಿ ಇಲಾಖೆಗೆ ನೀಡಲಾಗಿದೆ. ಉಳಿದ 9 ಕೆರೆಗಳು ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಗೆ ಬರುತ್ತಿವೆ. ಮುಳ್ಳೂರಿನ ಕೆರೆಯನ್ನು 8 ಮೀಟರ್ ಎತ್ತರ, 105 ಮೀಟರ್ ಉದ್ದ ಇದೆ. ಸರ್ಕಾರ ₹ 1 ಕೋಟಿ ವೆಚ್ಚದಲ್ಲಿ ಕೋಡಿ ದುರಸ್ತಿ ಹಾಗೂ ಕೆರೆಯ ಒಡ್ಡು ದುರಸ್ತಿ ಸೇರಿದಂತೆ ಹಲವು ಕಾಮಗಾರಿ ಕೈಗೊಳ್ಳಲಾಗುವುದು ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಜಹೂರ ಹಾಜಿ, ಗ್ರಾಮ ಪಂಚಾಯಿತಿ ಸದಸ್ಯ ಶಿವರಡ್ಡಿ ಹೂಲಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ. ಬಿ. ರಂಗನಗೌಡ್ರ, ಪೀರು ತಳವಾರ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT