ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಸ್ಲಿಮರು ನನ್ನ ಹೃದಯದಲ್ಲಿದ್ದಾರೆ: ಲಕ್ಷ್ಮಣ ಸವದಿ

‘ನನಗೀಗ ಮಾಡು ಇಲ್ಲವೇ ಮಡಿ ಸ್ಥಿತಿ ಬಂದಿದೆ, ನಿಮ್ಮ ಅಭಿಪ್ರಾಯವೂ ಮುಖ್ಯ’
Last Updated 18 ಮಾರ್ಚ್ 2023, 16:30 IST
ಅಕ್ಷರ ಗಾತ್ರ

ಅಥಣಿ (ಬೆಳಗಾವಿ ಜಿಲ್ಲೆ): ‘ಮುಸ್ಲಿಂ ಸಮಾಜದವರು ನನ್ನ ಹೃದಯದಲ್ಲಿ ಅಚ್ಚೊತ್ತಿದ್ದಾರೆ. ನನ್ನ ರಾಜಕೀಯ ಭವಿಷ್ಯಕ್ಕೆ ನಿಮ್ಮ ಅಭಿಪ್ರಾಯವೂ ಮುಖ್ಯ’ ಎಂದು ವಿಧಾನ ಪರಿಷತ್‌ ಸದಸ್ಯ ಲಕ್ಷ್ಮಣ ಸವದಿ ಹೇಳಿದರು.

ಪಟ್ಟಣದಲ್ಲಿ ಶನಿವಾರ ಮುಸ್ಲಿಂ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ‘ನನ್ನ ಸ್ವಾಭಿಮಾನಕ್ಕೆ ಧಕ್ಕೆ ಬಂದಿದೆ. ಹೀಗಾಗಿ, ನಾನು ಮಾರ್ಚ್‌ 27ರಂದು ಎಲ್ಲ ಸಮುದಾಯದವರ ಒಪ್ಪಿಗೆ ಪಡೆದು ಒಂದು ತೀರ್ಮಾನಕ್ಕೆ ಬರುತ್ತಿದ್ದೇನೆ. ಮುಸ್ಲಿಂ ಸಮಾಜದವರ ಅಭಿಪ್ರಾಯವೂ ನನಗೆ ಬೇಕು. ನೀವು ನನಗೆ ಯಾವಾಗಲೂ ಬೆಂಬಲವಾಗಿ ನಿಲ್ಲಬೇಕು’ ಎಂದರು.

‘ನಾನು ಮನೆಯಲ್ಲಿ ಸುಮನೆ ಕುಳಿತಿದ್ದೆ. ಆದರೆ, ಕೆಲವರು ನನ್ನನ್ನು ಕುಳಿತುಕೊಳ್ಳಲು ಬಿಡುತ್ತಿಲ್ಲ. ಹಾಗಾಗಿ ನಾನು ನಿಮ್ಮ ಮುಂದೆ ಬಂದಿದ್ದೇನೆ. ನನಗೀಗ ಮಾಡು ಇಲ್ಲವೇ ಮಡಿ ಎಂಬ ಸ್ಥಿತಿ ಇದೆ. ಅಥಣಿ ಕ್ಷೇತ್ರದಿಂದ ಸ್ಪರ್ಧೆಗೆ ಇಳಿಯಲೇಬೇಕು ಎಂದು ಸಮಾಜದವರು ಹೇಳಿದರೆ ಮಾತ್ರ ನಾನು ಟಿಕೆಟ್‌ ಕೇಳುತ್ತೇನೆ’ ಎಂದರು.

‘ಪಕ್ಷದ ವರಿಷ್ಠರು ನನ್ನ ಕೈ ಬಿಡುವುದಿಲ್ಲ ಎಂಬ ನಂಬಿಕೆ ಇದೆ. ಅವರು ಬೇಡ ಎಂದರೆ ನಾನು ಅವರ ಮಾರ್ಗದಲ್ಲಿ ನಡೆಯುತ್ತೇನೆ. ಅಥಣಿ ತಾಲ್ಲೂಕಿನ ಮುಸ್ಲಿಂ ಸಮುದಾಯ ನನ್ನ ಹೃದಯದಲ್ಲಿದೆ. ಎಲ್ಲ ಸಮುದಾಯದ ಒಪ್ಪಿಗೆ ಪಡೆದುಕೊಂಡು ಪಕ್ಷಕ್ಕೆ ತಿಳಿಸುತ್ತೇನೆ’ ಎಂದರು.

‘ಅಥಣಿ ಕ್ಷೇತ್ರದಲ್ಲಿ ಹಾಲಿ ಶಾಸಕ ಮಹೇಶ ಕುಮಠಳ್ಳಿ ಅವರಿಗೇ ಬಿಜೆಪಿ ಟಿಕೆಟ್‌ ನೀಡಬೇಕು, ಇಲ್ಲದಿದ್ದರೆ ಗೋಕಾಕದಲ್ಲಿ ನಾನೂ ಸ್ಪರ್ಧಿಸುವುದಿಲ್ಲ’ ಎಂದು ಶಾಸಕ ರಮೇಶ ಜಾರಕಿಹೊಳಿ ಈಚೆಗೆ ನೀಡಿದ ಹೇಳಿಕೆ ಕ್ಷೇತ್ರದಲ್ಲಿ ಗೊಂದಲ ಸೃಷ್ಟಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT