ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

50 ಕುಟುಂಬಗಳಿಗೆ ಆಹಾರ ಧಾನ್ಯ ವಿತರಣೆ

ರುದ್ರಾಕ್ಷಿ ಮಠದ ಸ್ವಾಮೀಜಿಯಿಂದ ಸೇವಾ ಕಾರ್ಯ
Last Updated 2 ಏಪ್ರಿಲ್ 2020, 11:12 IST
ಅಕ್ಷರ ಗಾತ್ರ

ಬೆಳಗಾವಿ: ಲಾಕ್‌ಡೌನ್‌ನಿಂದ ಕೆಲಸವಿಲ್ಲದೆ ಕಂಗಾಲಾಗಿರುವ 50 ಕೂಲಿಕಾರರು ಹಾಗೂ ಕಡು ಬಡವರಿಗೆ ಇಲ್ಲಿನ ನಾಗನೂರು ರುದ್ರಾಕ್ಷಿ ಮಠದ ಡಾ.ಅಲ್ಲಮಪ್ರಭು ಸ್ವಾಮೀಜಿ ಒಂದು ತಿಂಗಳಿಗಾಗುವಷ್ಟು ಆಹಾರ ಧಾನ್ಯವನ್ನು ಗುರುವಾರ ವಿತರಿಸಿದರು.

ಶಿವಬಸವನಗರದ ಮಠದ ಸಭಾಂಗಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಆಹಾರ ಧಾನ್ಯಗಳ ಚೀಲಗಳನ್ನು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಹಸ್ತಾಂತರಿಸಿದರು.

‘ಕೊರೊನಾ ವೈರಾಣು ಸೋಂಕು ಹರಡುವುದನ್ನು ತಡೆಯಲು ಎಲ್ಲರೂ ಕೈಗೂಡಿಸಿ ಕೆಲಸ ಮಾಡಬೇಕಾಗಿದೆ. ಕಡುಬಡವರಿಗೆ ಮಠದಿಂದ ಒಂದು ತಿಂಗಳಿಗೆ ಅವಶ್ಯವಿರುವ ಅಕ್ಕಿ, ಸಕ್ಕರೆ, ಸಾಬೂನು, ಟೂಥ್‌ ಪೇಸ್ಟ್‌, ಎಣ್ಣೆ, ಜೀರಿಗೆ, ಸಾಸಿವೆ ಮತ್ತಿತರ ವಸ್ತುಗಳನ್ನು ನೀಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಕುಟುಂಬಗಳಿಗೆ ಸೌಲಭ್ಯ ಒದಗಿಸಲಾಗುವುದು’ ಎಂದು ತಿಳಿಸಿದರು.

ಶಾಸಕ ಅನಿಲ ಬೆನಕೆ ಮಾತನಾಡಿ, ‘ಕೊರೊನಾ ಮಹಾಮಾರಿ ಎದುರಿಸುವ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ನೀಡಿರುವ ಸಲಹೆಯನ್ನು ಎಲ್ಲರೂ ಚಾಚೂ ತಪ್ಪದೆ ಪಾಲಿಸಬೇಕಾಗಿದೆ’ ಎಂದರು.

ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ, ಮುಖಂಡ ಹರೀಶ ಕರಿಗಣ್ಣವರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT