ಶನಿವಾರ, ಅಕ್ಟೋಬರ್ 31, 2020
27 °C

ಶಿರಾ ಉಪ ಚುನಾವಣೆ: 15 ದಿನದಲ್ಲಿ ಅಭ್ಯರ್ಥಿ ಘೋಷಣೆ– ಕಟೀಲ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಸಂಬಂಧಿಸಿದಂತೆ 10–15 ದಿನಗಳಲ್ಲಿ ಅಭ್ಯರ್ಥಿ ಘೋಷಿಸಲಾಗುವುದು’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ತಿಳಿಸಿದರು.

ಇಲ್ಲಿ ಮಂಗಳವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಟಿಕೆಟ್ ಘೋಷಣೆ ವಿಚಾರದಲ್ಲಿ ಪಕ್ಷವು ಎಲ್ಲ ಬೆಳವಣಿಗೆಗಳನ್ನೂ ಗಮನಿಸಿ, ತೀರ್ಮಾನಿಸಲಿದೆ. ನಾಲ್ಕೈದು ಆಕಾಂಕ್ಷಿಗಳ ಹೆಸರಿವೆ’ ಎಂದು ಹೇಳಿದರು.

‘ಅಲ್ಲಿ ನಮ್ಮ ಕೆಲಸ ಆರಂಭವಾಗಿದ್ದು, ಸಂಘಟನಾತ್ಮಕ ಚಟುವಟಿಕೆಗಳು ನಡೆದಿವೆ. ಬಿಜೆಪಿಗೆ ಗೆಲುವಿನ ವಾತಾವರಣವಿದೆ’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು