ಬುಧವಾರ, ಏಪ್ರಿಲ್ 1, 2020
19 °C

‘ನಂದಿನಿ’ ಹಾಲು ಸರಬರಾಜಿಗೆ ಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ಜಿಲ್ಲೆಯಾದ್ಯಂತ ಕೊರೊನಾ ವೈರಾಣು ಸೋಂಕು ಹರಡದಂತೆ ತಡೆಯಲು ಜಾರಿಗೊಳಿಸಲಾಗಿರುವ ಕರ್ಫ್ಯೂ ನಡುವೆಯೂ ಗ್ರಾಹಕರಿಗೆ ‘ನಂದಿನಿ’ ಹಾಲು ಸರಬರಾಜಿನಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳಲಾಗುತ್ತಿದೆ’ ಎಂದು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಉಬೇದುಲ್ಲಾ ಖಾನ್‌ ತಿಳಿಸಿದ್ದಾರೆ.

‘ಅಗತ್ಯ ಸೇವಾ ವಸ್ತುಗಳಲ್ಲಿ ಹಾಲು ಸಹ ಸೇರಿದೆ. ಗ್ರಾಕಕರು, ಎಂದಿನಂತೆ ‘ನಂದಿನಿ’ ಹಾಲನ್ನು ನಿಗದಿತ ಸಮಯಕ್ಕೆ ಯಾವುದೇ ಆತಂಕವಿಲ್ಲದೆ ಖರೀದಿಸಲು ಅನುಕೂಲ ಮಾಡಿಕೊಡಲು ವ್ಯವಸ್ಥೆ ಕೈಗೊಳ್ಳಲಾಗಿದೆ. ಅಧಿಕೃತ ಡೀಲರ್‌ಗಳು, ಕ್ಷೀರ ಕೇಂದ್ರಗಳು, ಫ್ರಾಂಚೈಸಿಗಳ ಮೂಲಕ ಜನರು ಎಂದಿನಂತೆ ಗರಿಷ್ಠ ಮಾರಾಟ ದರದಲ್ಲಿ (ಎಂಆರ್‌ಪಿ) ಹಾಲು ಖರೀದಿಸಬಹುದಾಗಿದೆ. ಬೇಡಿಕೆಗೆ ತಕ್ಕಂತೆ ಪೂರೈಕೆ ಮಾಡಲಾಗುತ್ತಿದೆ’ ಎಂದು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು