ಮಂಗಳವಾರ, 6 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ₹25.94 ಲಕ್ಷ ಮೌಲ್ಯದ ಮಾದಕ ವಸ್ತು ನಾಶ

Last Updated 25 ಮಾರ್ಚ್ 2023, 5:15 IST
ಅಕ್ಷರ ಗಾತ್ರ

ಬೆಳಗಾವಿ: ನಗರ ಹಾಗೂ ಜಿಲ್ಲೆಯ ವಿವಿಧೆಡೆ ವಶಪಡಿಸಿಕೊಂಡ ₹25.94 ಲಕ್ಷ ಮೌಲ್ಯದ ವಿವಿಧ ಮಾದಕ ವಸ್ತುಗಳನ್ನು ಶುಕ್ರವಾರ ನಾಶಪಡಿಸಲಾಯಿತು.

ನ್ಯಾಯಾಲಯದ ಆದೇಶದಂತೆ ನಗರ ಪೊಲೀಸ್‌ ಕಮಿಷನರ್‌ ಡಾ.ಎಂ.ಬಿ. ಬೋರಲಿಂಗಯ್ಯ ಹಾಗೂ ಎಸ್ಪಿ ಡಾ.ಸಂಜೀವ ಪಾಟೀಲ ಅವರ ನೇತೃತ್ವದಲ್ಲಿ ಗಾಂಜಾ ಹಾಗೂ ಇತರ ಮಾದಕ ವಸ್ತುಗಳನ್ನು ನಾಶ ಮಾಡಲಾಯಿತು. ಸವದತ್ತಿ ತಾಲ್ಲೂಕಿನ ಹಾರೂಗೊಪ್ಪ ಗ್ರಾಮದ ಬಳಿ ಇರುವ ಬೆಲಗಮ್‌ ಗ್ರೀನ್‌ ಎನ್ವಿರಾನ್ಮೆಂಟಲ್‌ ಮ್ಯಾನೇಜ್‌ಮೆಂಟ್‌ ಕಾರ್ಖಾನೆಯಲ್ಲಿ ಇವುಗಳಿಗೆ ಬೆಂಕಿ ಸ್ಪರ್ಶ ಮಾಡಲಾಯಿತು.

ನಗರ ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯ ಪೊಲೀಸ್‌ ಠಾಣೆಗಳಲ್ಲಿ 26 ಪ್ರಕರಣಗಳನ್ನು ದಾಖಲಿಸಿ, ₹6.20 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಅದೇ ರೀತಿ ಜಿಲ್ಲೆ ವಿವಿಧ ಠಾಣೆಗಳಲ್ಲಿ 39 ಪ್ರಕರಣ ದಾಖಲಿಸಿ ₹19.74 ಲಕ್ಷ ಬೆಲೆಬಾಳುವ ಮಾದಕ ವಸ್ತುಗಳನ್ನ ವಶಕ್ಕೆ ಪಡೆಯಲಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT