ಸೋಮವಾರ, 5 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮರ್ಥ ನಾಯಕತ್ವ ನೀಡಿದ ಮೋದಿ: ಎಂ.ಡಿ. ಚುನಮರಿ

Last Updated 17 ಸೆಪ್ಟೆಂಬರ್ 2020, 12:29 IST
ಅಕ್ಷರ ಗಾತ್ರ

ಗೋಕಾಕ: ‘ಅಟಲ್ ಬಿಹಾರಿ ವಾಜಪೇಯಿ ನಂತರ ರಾಷ್ಟ್ರಕ್ಕೆ ಸಮರ್ಥ ನಾಯಕತ್ವ ನೀಡಿದ ಹೆಗ್ಗಳಿಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲುತ್ತದೆ. ಆರ್‌ಎಸ್‌ಎಸ್‌ ಗರಡಿಯಲ್ಲಿ ಪಳಗಿದ ಅವರು ಬದ್ಧತೆ, ಪ್ರಾಮಾಣಿಕತೆ ಮತ್ತು ಶಿಸ್ತಿನ ಆಡಳಿತದ ಮೂಲಕ ವಿಶ್ವದ ಶ್ರೇಷ್ಠ ಪ್ರಧಾನಿಗಳಲ್ಲಿ ಒಬ್ಬರಾಗಿದ್ದಾರೆ’ ಎಂದು ಆರ್‌ಎಸ್‌ಎಸ್‌ ಮುಖಂಡ ಎಂ.ಡಿ. ಚುನಮರಿ ಹೇಳಿದರು.

ಇಲ್ಲಿನ ಎನ್ಎಸ್ಎಫ್ ಅತಿಥಿ ಗೃಹ ಆವರಣದಲ್ಲಿ ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರ 70ನೇ ಜನ್ಮ ದಿನದ ಪ್ರಯುಕ್ತ ವೃಕ್ಷಾರೋಪಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

‘ಪ್ರಧಾನಿ ಜನ್ಮ ದಿನದಂದು ದೇಶದಲ್ಲೆಡೆ ಸೇವಾ ಕಾರ್ಯಗಳನ್ನು ಬಿಜೆಪಿ ಕಾರ್ಯಕರ್ತರು ಹಮ್ಮಿಕೊಂಡಿರುವುದು ಜನಪ್ರಿಯತೆಗೆ ಸಾಕ್ಷಿಯಾಗಿದೆ’ ಎಂದರು.

‘ರಾಮಜನ್ಮ ಭೂಮಿ ವಿವಾದ ಸುಸೂತ್ರವಾಗಿ ಬಗೆಹರಿಯಲು ಅವರ ಪಾತ್ರ ದೊಡ್ಡದಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ನೆಲೆಸುವಂತೆ ಮಾಡಿದ್ದಾರೆ. ವಿಶ್ವದ ದೊಡ್ಡಣ್ಣ ಎನಿಸಿಕೊಳ್ಳುವ ಅಮೆರಿಕ ಸಹಿತ ಮೋದಿ ಮೋಡಿಗೆ ಒಳಗಾಗಿದ್ದು, ಭಾರತವಿಂದು ವಿಶ್ವಕ್ಕೆ ಗುರುವಾಗಿದೆ’ ಎಂದು ಹೇಳಿದರು.

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ, ‘ಪ್ರಧಾನಿ ಜನ್ಮ ದಿನದ ಅಂಗವಾಗಿ ಬಿಜೆಪಿಯಿಂದ ಸೇವಾ ಸಪ್ತಾಹ ನಡೆಯುತ್ತಿದೆ. ಬೂತ್ ಮಟ್ಟದ ಕಾರ್ಯಕರ್ತರು ಯಶಸ್ವಿಗೊಳಿಸಬೇಕು’ ಎಂದು ಕೋರಿದರು.

ಬಿಜೆಪಿ ಅರಭಾಂವಿ ಮಂಡಲದ ಅಧ್ಯಕ್ಷ ಮಹಾದೇವ ಶೆಕ್ಕಿ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಜ್ಯೋತಿ ಕೋಲ್ಹಾರ, ಜಿಲ್ಲಾ ಕಾರ್ಯದರ್ಶಿ ಮುತ್ತೆಪ್ಪ ಮನ್ನಾಪೂರ, ಅರಭಾಂವಿ ಮಂಡಲ ಪ.ಪಂಗಡ ಮೋರ್ಚಾ ಅಧ್ಯಕ್ಷ ಯಲ್ಲಾಲಿಂಗ ವಾಳದ, ಯುವ ಮೋರ್ಚಾ ಅಧ್ಯಕ್ಷ ಪ್ರಮೋದ ನುಗ್ಗಾನಟ್ಟಿ, ವಕೀಲ ಮುತ್ತೆಪ್ಪ ಕುಳ್ಳೂರ, ಮುಖಂಡರಾದ ಬಸಲಿಂಗ ಕೆಳಗಡೆ, ಗುರುರಾಜ ಪಾಟೀಲ, ಬಸವರಾಜ ಕಪರಟ್ಟಿ, ಪಾಂಡುರಂಗ ಮಹೇಂದ್ರಕರ, ಸಹದೇವ ಕಮತಿ, ಇಬ್ರಾಹಿಂ ಹುಣಶ್ಯಾಳ, ಗುತ್ತಿಗೆದಾರ ಪ್ರಕಾಶ ಕೊಂಗಾಲಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT