ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶ ಕಂಡ ಅಪ್ರತಿಮ ನಾಯಕ ಮೋದಿ: ರಮೇಶ ಜಾರಕಿಹೊಳಿ

Last Updated 17 ಸೆಪ್ಟೆಂಬರ್ 2021, 13:21 IST
ಅಕ್ಷರ ಗಾತ್ರ

ಗೋಕಾಕ: ‘ಪ್ರಧಾನಿ ನರೇಂದ್ರ ಮೋದಿ ಅವರು ದೂರದೃಷ್ಟಿಯ ಯೋಜನೆಯ ನೇತಾರರಾಗಿ ದೇಶವನ್ನು ಬಲಿಷ್ಠಗೊಳ್ಳಿಸಿದ್ದಲ್ಲದೇ, ವಿಶ್ವಗುರು ಮಟ್ಟಕ್ಕೆ ಏರಿಸಿದ ಕೀರ್ತಿಗೆ ಪಾತ್ರರಾಗಿದ್ದಾರೆ’ ಎಂದು ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

ಇಲ್ಲಿನ ಯೋಗಿಕೊಳ್ಳ ಮಾರ್ಗದ ತಮ್ಮ ಗೃಹ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನದ ಅಂಗವಾಗಿ ಶುಕ್ರವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಭಾರತ ಮಾತೆ ಫೋಟೊಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.

‘ಪ್ರಧಾನಿಯಾಗಿ 7 ವರ್ಷಗಳಿಂದ ಉತ್ತಮ ಕಾರ್ಯನಿರ್ವಹಿಸುತ್ತಿದ್ದಾರೆ. ವಿವಿಧ ಜನರ ಯೋಜನೆಗಳಿಂದ ದೇಶ ಮುನ್ನಡೆಸುತ್ತಿದ್ದಾರೆ. ಅವರು ದೇಶ ಕಂಡ ಅಪ್ರತಿಮ ನಾಯಕ. ವಿಶ್ವದ ಹಲವು ಪ್ರಮುಖ ನಾಯಕರ ಪೈಕಿ ಒಬ್ಬರಾಗಿ ಗಮನಸೆಳೆದಿದ್ದಾರೆ. ಅವರು ಅಧಿಕಾರ ವಹಿಸಿಕೊಂಡ ನಂತರ ಭಾರತದ ದಿಕ್ಕೇ ಬದಲಾಗಿದೆ. ಜಗತ್ತಿನ ಅಭಿವೃದ್ಧಿ ಪಥದಲ್ಲಿರುವ ರಾಷ್ಟ್ರಗಳಲ್ಲಿ ನಮ್ಮದೂ ಒಂದಾಗಿದೆ. ದೇಶದ ರಕ್ಷಣೆ, ಆರ್ಥಿಕ ವ್ಯವಸ್ಥೆ, ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಚಾಪು ಮೂಡಿಸಿ ದಿಟ್ಟ ನಾಯಕ ಎನಿಸಿದ್ದಾರೆ’ ಎಂದು ಬಣ್ಣಿಸಿದರು.

ಬಡ ರೋಗಿಗಳಿಗೆ ಹಣ್ಣು ವಿತರಿಸಿದರು.

ಮುಖಂಡ ತುಕಾರಾಮ ಕಾಗಲ್, ಬಿಜೆಪಿ ನಗರ ಘಟಕ ಅಧ್ಯಕ್ಷ ಭೀಮಶಿ ಭರಮನ್ನವರ, ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಉಪಾಧ್ಯಕ್ಷ ಬಸವರಾಜ ಆರೆನ್ನವರ, ಮುಖಂಡರಾದ ಸುರೇಶ ಪಾಟೀಲ, ಶಾಮಾನಂದ ಪೂಜೇರಿ, ಶಶಿಧರ ದೇಮಶೆಟ್ಟಿ, ಶಾಸಕರ ಆಪ್ತಸಹಾಯಕ ಭೀಮಗೌಡ ಪೋಲಿಸಗೌಡರ, ಸುರೇಶ ಸನದಿ, ನಗರಸಭೆ ಪ್ರಭಾರ ಪೌರಾಯುಕ್ತ ಶಿವಾನಂದ ಹಿರೇಮಠ, ಟಿಎಚ್‌ಒ ಡಾ.ಮುತ್ತಣ್ಣ ಕೊಪ್ಪದ, ಸರ್ಕಾರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ರವೀಂದ್ರ ಅಂಟಿನ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT