ಅಥಣಿ: ಪ್ರತಿಯೊಬ್ಬ ನಾಗರಿಕನೂ ರಸ್ತೆ ಸುರಕ್ಷತಾ ನಿಯಮಗಳನ್ನು ತಪ್ಪದೇ ಪಾಲಿಸಿದಾಗ ಅಪಘಾತಗಳನ್ನು ತಪ್ಪಿಸಲು ಸಾಧ್ಯವಾಗಲಿದೆ ಎಂದು 11ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಇ.ಎಸ್.ಈರಣ್ಣ ಹೇಳಿದರು.

ಅವರು ಪಟ್ಟಣದ ಛತ್ರಪತಿ ಶಿವಾಜಿ ಮಹಾರಾಜ ವೃತ್ತದಲ್ಲಿ ಪ್ರಾದೇಶಿಕ ಸಾರಿಗೆ ಇಲಾಖೆ ಕಚೇರಿ, ತಾಲ್ಲೂಕು ಕಾನೂನು ಸೇವಾ ಸಮಿತಿ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಕಾರ್ಯನಿರತ ಪತ್ರಕರ್ತರ ಸಂಘ, ಭಾರತೀಯ ವೈದ್ಯಕೀಯ ಸಂಘ, ಹಾಗೂ ವಿವಿಧ ಕನ್ನಡಪರ ಸಂಘಟನೆಗಳು ಸಹಯೋಗದಲ್ಲಿ ಬುಧವಾರ 37ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ -2026 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಅಥಣಿ ವಲಯದ ಡಿವೈಎಸ್ಪಿ ಪ್ರಶಾಂತ ಮುನ್ನೊಳ್ಳಿ ಮಾತನಾಡಿ, ಚಿಕ್ಕ ಮಕ್ಕಳು, ಮಹಿಳೆಯರು ಲೈಸನ್ಸ್ ಇಲ್ಲದೇ ರಸ್ತೆಯ ನಿಯಮಗಳನ್ನು ಪಾಲಿಸದೆ ವಾಹನ ಚಲಾಯಿಸುತ್ತಿದ್ದಾರೆ. ಇದರಿಂದ ಅಪಘಾತಗಳ ಸಂಖ್ಯೆಯೂ ಹೆಚ್ಚುತ್ತಿದೆ ಎಂದರು.

ಅಥಣಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಮಂಜುನಾಥ ಶಿರಾಲಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಹಿರಿಯ ಸಿವಿಲ್ ನ್ಯಾಯಾಧೀಶ ನಾಮದೇವ ಕೆ. ಸಾಲಮಂಟಪಿ, ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ರವಿಕುಮಾರ್ ಕೆ, ಪ್ರಧಾನ ದಿವಾನಿ ನ್ಯಾಯಾಧೀಶ ಓಂಕಾರ್ ಮೂರ್ತಿ ಎಚ್, 1ನೇ ಹೆಚ್ಚುವರಿ ದಿವಾನಿ ನ್ಯಾಯಾಧೀಶ ರವೀಂದ್ರ ಹಾವರಗಿ, ಎರಡನೇ ಹೆಚ್ಚುವರಿ ದಿವಾನಿ ನ್ಯಾಯಾಧೀಶ ಸುನಿತಾ ಪ್ರಭಣ್ಣವರ , ಮೂರನೇ ಹೆಚ್ಚುವರಿ ದಿವಾನಿ ನ್ಯಾಯಾಧೀಶ ಭಾಗ್ಯಶ್ರೀ ಮಾದರ, ಅಥಣಿ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಅಣ್ಣಪ್ಪ ಹುದ್ದಾರ, ಸಹಾಯಕ ಸರಕಾರಿ ಅಭಿಯೋಜಕ ಬಸಪ್ಪ ಕಾಂಬಳೆ, ಅಥಣಿ ಆರ್ ಟಿ ಓ ಕಚೇರಿಯ ಹಿರಿಯ ಮೊಟಾರು ವಾಹನ ನಿರೀಕ್ಷಕ ಶಿವಾನಂದ ಗುಡ್ಡೋಡಗಿ, ಅಧೀಕ್ಷಕ ಶ್ರೀರಂಗ ಜೋಶಿ, ಐಎಂಎ ಅಧ್ಯಕ್ಷ ಡಾ. ಸ್ಮಿತಾ ಚೌಗಲಾ, ಡಾ. ಮಹೇಶ್ ಕಾಫಸೆ, ಡಾ. ಮುರುಗೇಶ್ ಅವಟಿ, ಡಾ. ಆನಂದ್ ಗುಂಜಿಗಾವಿ, ಡಾ. ಮಲ್ಲಿಕಾರ್ಜುನ ಹಂಜಿ, ಕನ್ನಡಪರ ಹೋರಾಟಗಾರರಾದ ಅಣ್ಣಾಸಾಹೇಬ ತೆಲಸಂಗ, ಮಾಕಾಣಿ, ಜಗನ್ನಾಥ ಬಾಮನೆ, ವಾಹನ ಚಾಲನಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಸಿದ್ದು ಹಂಡಗಿ, ರೈತ ಸಂಘದ ಅಧ್ಯಕ್ಷ ಮಹದೇವ ಮಡಿವಾಳ ಇದ್ದರು.

ಪ್ರಾದೇಶಿಕ ಸಾರಿಗೆ ಇಲಾಖೆಯ ಹಿರಿಯ ವಾಹನ ನಿರೀಕ್ಷಕ ಶಿವಾನಂದ ಗುಡ್ಡೋಡಗಿ ಪ್ರಾಸ್ತಾವಿಕವಾಗಿಮಾತನಾಡಿದರು. ಅಣ್ಣಾಸಾಹೇಬ ತೆಲಸಂಗ ನಿರೂಪಿಸಿದರು. ಶ್ರೀರಂಗ ಜೋಶಿ ವಂದಿಸಿದರು.

ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು, ಕಾರ್ ಚಾಲಕರು ಸೀಟ್ ಬೆಲ್ಟ್ ಧರಿಸಬೇಕು. ಅಪಘಾತದಲ್ಲಿ ಇವು ಪ್ರಾಣ ರಕ್ಷಣೆ ಮಾಡುತ್ತವೆ
ಮಂಜುನಾಥ ಶಿರಾಲಿ, ಅಥಣಿ ಪ್ರಾದೇಶಿಕ ಸಾರಿಗೆ ಅಧಿಕಾರಿ

ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ

ಅಥಣಿ ಪಟ್ಟಣದ ಶಿವಾಜಿ ವೃತ್ತದಲ್ಲಿ ಆರಂಭವಾದ ಪಾದಯಾತ್ರೆ ಮೆರವಣಿಗೆ ಬಸವೇಶ್ವರ ವೃತ್ತ, ಶಿವಯೋಗಿ ವೃತ್ತ, ವೀರರಾಣಿ ಚೆನ್ನಮ್ಮ ವೃತ್ತ ಹಾದು ಹೋಯಿತು. ಅಂಬೇಡ್ಕರ್ ವೃತ್ತದಲ್ಲಿ ರಸ್ತೆ ಸುರಕ್ಷತಾ ನಿಯಮಗಳ ಕುರಿತು ಜನಜಾಗೃತಿ ಮೂಡಿಸಲಾಯಿತು.

ಇದೇ ಸಂದರ್ಭದಲ್ಲಿ ಭಾರತೀಯ ವೈದ್ಯಕೀಯ ಸಂಘದಿಂದ 50 ಜನ ಬೈಕ್ ಸವಾರರಿಗೆ ಉಚಿತವಾಗಿ ಹೆಲ್ಮೆಟ್ ಗಳನ್ನು ವಿತರಿಸುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.