ಸವದತ್ತಿ (ಬೆಳಗಾವಿ ಜಿಲ್ಲೆ): ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆ ಆಗುತ್ತಿರುವ ಕಾರಣ ಜಿಲ್ಲೆಯ ನವಿಲುತೀರ್ಥ ಜಲಾಶಯ (ಇಂದಿರಾ ಅಣೆಕಟ್ಟೆ) ಅವಧಿಗೂ ಮುನ್ನ ಭರ್ತಿಯಾಗುವ ಸಾಧ್ಯತೆಗಳಿವೆ. ಗರಿಷ್ಠ 2079.50 ಅಡಿ ಸಾಮರ್ಥ್ಯದ ಜಲಾಶಯ ಭರ್ತಿಗೆ ಇನ್ನು 4.7 ಅಡಿ ಬಾಕಿ ಇದೆ.

‘ಸದ್ಯಕ್ಕೆ 2074.80 ಅಡಿ ನೀರು ಸಂಗ್ರಹವಿದೆ. ಒಳಹರಿವು 7,286 ಕ್ಯೂಸೆಕ್ ಇದೆ. 2,894 ಕ್ಯೂಸೆಕ್ ನೀರನ್ನು ನದಿಗೆ ಹರಿಸಲಾಗುತ್ತಿದೆ. ನದಿಪಾತ್ರದಲ್ಲಿ ಜನರು ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ ’ ಎಂದು ಸವದತ್ತಿ ತಹಶೀಲ್ದಾರ್ ಎಂ.ಎನ್. ಹೆಗ್ಗಣ್ಣವರ ತಿಳಿಸಿದ್ದಾರೆ.

ನೀರಿನ ಹರಿವು ಇಳಿಕೆ: ಚಿಕ್ಕೋಡಿ-ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ಮಳೆ ತಗ್ಗಿದ್ದು, ಕೃಷ್ಣಾ ಹಾಗೂ ಉಪನದಿಗಳಲ್ಲಿ ನೀರಿನ ಹರಿವಿನ ಪ್ರಮಾಣ ಬುಧವಾರ ಇಳಿಮುಖವಾಗಿದೆ.

ಮಹಾರಾಷ್ಟ್ರದ ರಾಜಾಪೂರೆ ಬ್ಯಾರೇಜ್ನಿಂದ ಕೃಷ್ಣಾ ನದಿಗೆ 1,07,750 ಕ್ಯೂಸೆಕ್ ಹೊರ ಹರಿವು ಇದ್ದು, ಸದಲಗಾ ಪಟ್ಟಣದ ಬಳಿಯಲ್ಲಿ ದೂಧಗಂಗಾ ನದಿಗೆ 18,656 ಕ್ಯೂಸೆಕ್ ಹೊರ ಹರಿವು ಇದೆ. ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯ 8ಕ್ಕೂ ಹೆಚ್ಚು ಸೇತುವೆಗಳು ಜಲಾವೃತಗೊಂಡ ಸ್ಥಿತಿಯಲ್ಲೇ ಇವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.