ಗುರುವಾರ , ಫೆಬ್ರವರಿ 2, 2023
27 °C

ಬೆಳಗಾವಿ: ಯಲ್ಲಮ್ಮ ದೇಗುಲದಲ್ಲಿ ಆಯುಧ ಪೂಜೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

PV Photo

ಉಗರಗೋಳ(ಬೆಳಗಾವಿ ಜಿಲ್ಲೆ): ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡದ ಯಲ್ಲಮ್ಮ ದೇವಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಅಂಗವಾಗಿ ಮಂಗಳವಾರ ಆಯುಧ ಪೂಜೆ ನಡೆಯಿತು. ಸಕಲ ಜೀವರಾಶಿ ಒಳಿತಿಗೆ ಪ್ರಾರ್ಥಿಸಿ, ಭಕ್ತರು ಯಲ್ಲಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

ನವರಾತ್ರಿ ಅಂಗವಾಗಿ ಯಲ್ಲಮ್ಮನ ಸನ್ನಿಧಿಗೆ ಕರ್ನಾಟಕ, ಮಹಾರಾಷ್ಟ್ರದಿಂದ ಲಕ್ಷಾಂತರ ಭಕ್ತರ ದಂಡೇ ಹರಿದುಬಂದಿದೆ. ಭಕ್ತರು ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆಯುತ್ತಿದ್ದಾರೆ.

ಬುಧವಾರ ಸಂಜೆ ಉಗರಗೋಳ ಮಾರ್ಗದಲ್ಲಿರುವ ಬಣ್ಣೆಮ್ಮ ದೇವಿ ದೇವಸ್ಥಾನ ಬಳಿ ಬನ್ನಿ ಮುಡಿಯುವ ಮೂಲಕ ದಸರೆ ವೈಭವಕ್ಕೆ ತೆರೆ ಬೀಳಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು