ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಪ್ಪಾಣಿ: 25 ಎನ್‍ಸಿಪಿ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

Published 11 ಏಪ್ರಿಲ್ 2024, 14:28 IST
Last Updated 11 ಏಪ್ರಿಲ್ 2024, 14:28 IST
ಅಕ್ಷರ ಗಾತ್ರ

ನಿಪ್ಪಾಣಿ: ತಾಲ್ಲೂಕಿನ ಶೇಂಡೂರ ಗ್ರಾಮದ ಸುಮಾರು 25 ಎನ್‍ಸಿಪಿ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಗೊಂಡರು. ತಾಲ್ಲೂಕಿನ ಭಿವಶಿ ಗ್ರಾಮದಲ್ಲಿ ಶಾಸಕಿ ಶಶಿಕಲಾ ಜೊಲ್ಲೆ ಎಲ್ಲ ಕಾರ್ಯಕರ್ತರನ್ನು ಪಕ್ಷದ ಶಾಲು ಹೊದಿಸಿ ಬರಮಾಡಿಕೊಂಡರು.

ಗ್ರಾಮದ ರಾಜೇಂದ್ರ ಲಾಡ, ಪ್ರವೀಣ ಲಾಡ ನೇತೃತ್ವದಲ್ಲಿ ವಿನಾಯಕ ಗಿರಿ, ತುಕಾರಾಮ ವಡೆಖರ, ಪಾಂಡುರಂಗ ಲಾಡ, ಗಜಾನನ ಕಾಂಬಳೆ, ರಾಜೇಂದ್ರ ದಳವಿ, ಅಣ್ಣಪ್ಪಾ ತೋಡಕರ, ಸಂದೀಪ ದೇಸಾಯಿ, ಮೊದಲಾದವರು ಸೇರಿದಂತೆ ಸುಮಾರು 25 ಕಾರ್ಯಕರ್ತರು ಎನ್‍ಸಿಪಿ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಗೊಂಡರು.

ಶಾಸಕಿ ಶಶಿಕಲಾ ಜೊಲ್ಲೆ ಮಾತನಾಡಿ, ‘ಕಳೆದ 10 ವರ್ಷಗಳಲ್ಲಿ ಬಿಜೆಪಿ ಭಾರತದ ಚಿತ್ರಣವೇ ಬದಲಾಯಿಸಿದೆ. ಸಂಸದ ಅಣ್ಣಾಸಾಹೇಬ ಜೊಲ್ಲೆಯವರು ತಮ್ಮ ಆಡಳಿತ ಅವಧಿಯಲ್ಲಿ ₹8,810 ಕೋಟಿಗೂ ಅಧಿಕ ಅಭಿವೃಧ್ಧಿ ಕಾಮಗಾರಿಗಳನ್ನು ತಮ್ಮ ಕ್ಷೇತ್ರದಲ್ಲಿ ಕೈಗೊಂಡಿದ್ದಾರೆ. ಇದು ಅವರ ಗೆಲುವಿಗೆ ಶ್ರೀರಕ್ಷೆಯಾಗಲಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT