ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಸದೆ ಮಂಗಳಾ ಅಂಗಡಿ ಎದುರು ಕಾಲಿನ ಮೇಲೆ ಕಾಲು ಹಾಕಿ ಕುಳಿತ ಸಿಎಂ ಬೊಮ್ಮಾಯಿ: ಟೀಕೆ

Last Updated 12 ಡಿಸೆಂಬರ್ 2021, 14:36 IST
ಅಕ್ಷರ ಗಾತ್ರ

ಬೆಳಗಾವಿ: ‘ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ತಮ್ಮನ್ನು ಭೇಟಿಯಾದ ಸಂಸದೆ ಮಂಗಲಾ ಅಂಗಡಿ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಗೌರವ ತೋರಿದ್ದಾರೆ’ ಎಂದು ನೆಟ್ಟಿಗರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

‘ಸಂಸದರು ವಿನಯದಿಂದ ಮನವಿ ಸಲ್ಲಿಸುತ್ತಿದ್ದರೆ, ಮುಖ್ಯಮಂತ್ರಿಯು ಕಾಲಿನ ಮೇಲೆ ಕಾಲು ಹಾಕಿ ಕುಳಿತಿದ್ದು ಸರಿಯಲ್ಲ. ಇಂತಹ ನಡವಳಿಕೆ ಶೋಭೆ ತರುವುದಿಲ್ಲ’ ಎಂದು ಕುಟುಕಿದ್ದಾರೆ.

ಮುಖ್ಯಮಂತ್ರಿ ಭೇಟಿಯಾಗಿ ಮನವಿ ಸಲ್ಲಿಸಿದ ಫೋಟೊಗಳನ್ನು ಮಂಗಲಾ ಅವರು ಫೇಸ್‌ಬುಕ್‌ನ ತಮ್ಮ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇದನ್ನು ಗಮನಿಸಿದ ನೆಟ್ಟಿಗರು, ‘ಸಂಸದರನ್ನು ಕೂರಿಸಿ ಮಾತನಾಡಿಸುವಷ್ಟು ಸೌಜನ್ಯವನ್ನೂ ಮುಖ್ಯಮಂತ್ರಿ ತೋರದಿರುವುದು ಸರಿಯಲ್ಲ’ ಎಂಬಿತ್ಯಾದಿ ಪೋಸ್ಟ್‌ಗಳನ್ನು ಹಾಕಿದ್ದಾರೆ.

‘ಕಿತ್ತೂರು– ಧಾರವಾಡ ರೈಲು ಮಾರ್ಗಕ್ಕೆ ಶೀಘ್ರ ಆಡಳಿತಾತ್ಮಕ ಅನುಮೋದನೆ ನೀಡಬೇಕು. ಈ ಮಾರ್ಗದಿಂದ ಇಲ್ಲಿನ ಜನರಿಗೆ ಸಾಕಷ್ಟು ಅನುಕೂಲ ಆಗುತ್ತದೆ. ಶೈಕ್ಷಣಿಕ ಹಾಗೂ ಕೈಗಾರಿಕಾ ದೃಷ್ಟಿಯಿಂದಲೂ ಅಭಿವೃದ್ಧಿ ಕಾಣಲಿದೆ’ ಎಂದು ತಿಳಿಸಿದ್ದಾಗಿ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

‘ನಗರದ ನಾನಾವಾಡಿ-ಸಾವಗಾಂವ ರಸ್ತೆ ಅಭಿವೃದ್ಧಿಪಡಿಸುವಂತೆ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಬೇಕು. ಅತಿವೃಷ್ಟಿ ಹಾಗೂ ಪ್ರವಾಹದ ಸಂದರ್ಭದಲ್ಲಿ ಹಾಳಾದ ರಸ್ತೆಗಳ ಸುಧಾರಣೆಗೂ ತುರ್ತು ಅನುಮೋದನೆ ಕೊಡಬೇಕು ಎಂದು ಕೋರಲಾಯಿತು. ಸಕಾರಾತ್ಮಕವಾಗಿ ಸ್ಪಂದಿಸಿದ ಅವರು ಕೂಡಲೇ ಅನುಮೋದನೆ ಕೊಡಲಾಗುವುದು ಎಂದು ಭರವಸೆ ನೀಡಿದ್ದಾರೆ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT