ಶುಕ್ರವಾರ, ಡಿಸೆಂಬರ್ 3, 2021
20 °C

ಎಸ್‌ಡಿಪಿಐ: ಪದಾಧಿಕಾರಿಗಳ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಎಸ್‍ಡಿಪಿಐ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳನ್ನು (2021-24ರ ಅವಧಿಗೆ) ಸೋಮವಾರ ಆಯ್ಕೆ ಮಾಡಲಾಯಿತು.

ಜಿಲ್ಲಾ ಘಟಕದ ಅಧ್ಯಕ್ಷರಾಗಿ ಆಬಿದ್ ಖಾನ್ ಮತ್ತು ಉಪಾಧ್ಯಕ್ಷರಾಗಿ ಕತಾಲ್ ಅಹ್ಮದ್, ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಅಂಜುಮ್ ಮುಗುಟ್ ಖಾನ್, ಕಾರ್ಯದರ್ಶಿಯಾಗಿ ಮುಝಮ್ಮಿಲ್, ಖಜಾಂಚಿಯಾಗಿ ರೆಹಬರ್ ಮುಲ್ಲಾ ಹಾಗೂ ಸದಸ್ಯರಾಗಿ ಅಫ್ಜಲ್, ತಾಜುದ್ದೀನ್, ಝಕಿಉಲ್ಲಾ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ತಿಳಿಸಿದರು.

ಕನ್ನಡ ಸಾಹಿತ್ಯ ಭವನದಲ್ಲಿ ನಡೆದ ಪ್ರಕ್ರಿಯೆಗೆ ರಾಷ್ಟ್ರೀಯ ಸಮಿತಿ ಸದಸ್ಯ ಅಬ್ದುಲ್ ಲತೀಫ್ ಚಾಲನೆ ನೀಡಿದರು.

‘ಹಿಂದೂ ಯುವತಿಯನ್ನು ಪ್ರೀತಿಸಿದ ಕಾರಣಕ್ಕೆ ಖಾನಾಪುರದಲ್ಲಿ ಕೊಲೆಯಾದ ಯುವಕ ಅರ್ಬಾಜ್‌ ಮುಲ್ಲಾ ಕುಟುಂಬಕ್ಕೆ ಪರಿಹಾರ ನೀಡಬೇಕು. ಆ ಹತ್ಯೆಯ ಹಿಂದಿರುವ ಸಂಚುಕೋರರು ಮತ್ತು ಸೂತ್ರಧಾರರನ್ನು ಕೂಡ ಬಂಧಿಸಬೇಕು. ಅವರಿಗೆ ಕಠಿಣ ಶಿಕ್ಷೆ ಆಗುವಂತೆ ಪೊಲೀಸರು ನೋಡಿಕೊಳ್ಳಬೇಕು’ ಎಂದು ಅಪ್ಸರ್ ಕೊಡ್ಲಿಪೇಟೆ ಒತ್ತಾಯಿಸಿದರು.

‘ಕೊಲೆಗಡುಕರಿಗೆ ಶಿಕ್ಷೆ ಆಗುವವರೆಗೆ ಈ ಪ್ರಕರಣದಲ್ಲಿ ಕಾನೂನು ನೆರವನ್ನು ಎಸ್‌ಡಿಪಿಐಯಿಂದ ನೀಡಲಾಗುವುದು’ ಎಂದರು.

ರಾಜ್ಯ ಘಟಕದ ಮಾಧ್ಯಮ ಉಸ್ತುವಾರಿ ಅಕ್ರಮ್ ಹಸನ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.