ಗೋಕಾಕ: ಗೋಕಾಕ ಹೊರವಲಯದ ಲೋಳಸೂರ ಬಳಿ ಘಟಪ್ರಭಾ ನದಿಗೆ ನಿರ್ಮಿಸಲಾಗುತ್ತಿರುವ ₹30.21 ಕೋಟಿ ವೆಚ್ಚದ ನೂತನ ಸೇತುವೆ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಬುಧವಾರ ಭೇಟಿ ನೀಡಿ ಪರಿಶೀಲಿಸಿದರು.

ತದನಂತರ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ‘ನೂತನ ಸೇತುವೆ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳುತ್ತಲೇ ಅದರಿಂದ ಸಾರ್ವಜನಿಕರು ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಬಹಳಷ್ಟು ಅನುಕೂಲವಾಗಲಿದೆ. ಮಳೆಗಾಲ, ಪ್ರವಾಹದಂತಹ ಸಂರ್ಭಗಳಲ್ಲಿಯೂ ನೂತನ ಎತ್ತರದ ಸೇತುವೆ ಸಹಾಯಕವಾಗಲಿದೆ’ ಎಂದು ಹೇಳಿದರು.

‘ಬ್ರಿಟಿಷರ ಕಾಲಾವಧಿಯಲ್ಲಿ ನಿರ್ಮಾಣಗೊಂಡಿದ್ದ ಕಿರಿದಾದ ಸೇತುವೆ ಮತ್ತು ಅದರ ಪಕ್ಕದಲ್ಲೇ ಸನ್ 1964ರಲ್ಲಿ ನಿರ್ಮಿಸಲಾಗಿದ್ದ ದೊಡ್ಡದಾದ ಸೇತುವೆಗಳ ನಡುವೆಯೇ ಹೊಸ ಸೇತುವೆಯು ತಲೆ ಎತ್ತಲಿದೆ. ಎರಡೂ ಸೇತುವೆಗಳಿಗೆ ಯಾವುದೇ ಹಾನಿಯಾಗದಂತೆ ಕಾಮಗಾರಿ ಕೈಕೊಳ್ಳಲು ಅಧಿಕಾರಿಗಳಿಗೆ ಸಚಿಸಲಾಗಿದೆ’ ಎಂದರು.

ಘಟಪ್ರಭಾ ಕಾಲುವೆ ಮೇಲಿನ ಸೇತುವೆ ಸ್ಥಳಕ್ಕೂ ಭೇಟಿ: ತದನಂತರ ಸಂಕೇಶ್ವರ– ನರಗುಂದ ರಾಜ್ಯ ಹೆದ್ದಾರಿಯ ಭಾಗವಾಗಿರುವ ಘಟಪ್ರಭಾ ಹೊರವಲಯದ ಘಟಪ್ರಭಾ ಎಡದಂತೆ ಕಾಲುವೆ ಮೇಲೆ ಅಡ್ಡಲಾಗಿ ನಿರ್ಮಾಣಗೊಳ್ಳುತ್ತಿರುವ ನೂತನ ಸೇತುವೆ ಕಾಮಗಾರಿ ಸ್ಥಳಕ್ಕೂ ಭೇಟಿ ನೀಡಿದ ಸಚಿವರು, ವಾಹನಗಳ ತಾತ್ಕಾಲಿಕ ಮತ್ತು ಸುಗಮ ಸಂಚಾರಕ್ಕೆ ಸೇತುವೆ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.