ಭಾನುವಾರ, ಆಗಸ್ಟ್ 14, 2022
20 °C

ಆರೋಗ್ಯವಾಗಿದ್ದೇನೆ, ಆತಂಕ ಬೇಡ: ನಿಡಸೋಸಿ ಶ್ರೀ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಧಾರವಾಡ ಸಮೀಪ ಬುಧವಾರ ಸಂಭವಿಸಿದ ಕಾರ್‌ ಅಪಘಾತದಲ್ಲಿ ಗಾಯಗೊಂಡ ಹುಕ್ಕೇರಿ ತಾಲ್ಲೂಕಿನ ನಿಡಸೋಸಿ ಮಠದ ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ, ಇಲ್ಲಿನ ಕೆಎಲ್‌ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಪಘಾತದ ಸುದ್ದಿ ತಿಳಿದ ತಕ್ಷಣ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ ಅವರು ಆಸ್ಪತ್ರೆಗೆ ದೌಡಾಯಿಸಿ ಶ್ರೀಗಳ ಆರೋಗ್ಯ ವಿಚಾರಿಸಿದರು. ಈ ವೇಳೆ ಎದ್ದುಕುಳಿತ ಸ್ವಾಮೀಜಿ, ಸಚಿವ ಉಮೇಶ ಕತ್ತಿ ಅವರೊಂದಿಗೂ ಮೊಬೈಲ್‌ ಮೂಲಕ ಮಾತನಾಡಿ ಆರೋಗ್ಯವಾಗಿ ಇರುವುದಾಗಿ ತಿಳಿಸಿದರು.

ಶ್ರೀಗಳ ಮೊಣಕಾಲು, ಮೊಣಕೈಗೆ ಸಣ್ಣಪುಟ್ಟ ಗಾಯಗಳಾಗಿವೆ. ಆದರೂ ಮುಂಜಾಗ್ರತಾ ಕ್ರಮವಾಗಿ ಅವರನ್ನು ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಈ ಕುರಿತು ಮಾಧ್ಯಮಗಳಿಗೆ ವಿಡಿಯೊ ಹೇಳಿಕೆ ನೀಡಿದ ಸ್ವಾಮೀಜಿ, ‘ವಾಹನ ಅಪಘಾತವಾದರೂ ಅದರಲ್ಲಿದ್ದ ಎಲ್ಲ ಐದೂ ಮಂದಿ ಸುರಕ್ಷಿತವಾಗಿದ್ದೇವೆ. ನಾನು ಕೂಡ ಆರೋಗ್ಯವಾಗಿದ್ದೇನೆ. ಭಕ್ತರು ಆತಂಕ ಪಡುವ ಅಗತ್ಯವಿಲ್ಲ’ ಎಂದು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು