ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂಡಲಗಿ: ‘ಮಠಮಾನ್ಯಗಳ ಕೊಡುಗೆ ಅಪಾರ’

Published 3 ಜನವರಿ 2024, 15:45 IST
Last Updated 3 ಜನವರಿ 2024, 15:45 IST
ಅಕ್ಷರ ಗಾತ್ರ

ಮೂಡಲಗಿ: ಸಮಾಜದ ಸ್ವಾಸ್ಥ್ಯ ಕಾಯುವಲ್ಲಿ ನಾಡಿನ ಮಠಮಾನ್ಯಗಳ ಪಾತ್ರ ಮಹತ್ವದಾಗಿದೆ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಹೇಳಿದರು.

ತಾಲ್ಲೂಕಿನ ಹುಣಶಾಳ ಪಿಜಿಯ ಸಿದ್ಧಲಿಂಗ ಕೈವಲ್ಯಾಶ್ರಮದ ನಿಜಗುಣ ದೇವರ ಷಷ್ಠ್ಯಬ್ಧಿ ಕಾರ್ಯಕ್ರಮದಲ್ಲಿ ಶ್ರೀಗಳು ನೀಡಿದ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಅವರು, ಮಠಗಳು ಧಾರ್ಮಿಕ ಕಾರ್ಯಗಳೊಂದಿಗೆ ನಾಡಿನ ಸಂಸ್ಕೃತಿ ಪರಂಪರೆ, ಸಂಸ್ಕಾರ, ಶಿಕ್ಷಣ ಪ್ರಸಾರ ಹಾಗೂ ಆಧ್ಯಾತ್ಮಿಕ ಚಿಂತನೆಗಳಿಂದ ನಾಡಿಗೆ ಬಹುದೊಡ್ಡ ಕೊಡುಗೆ ನೀಡಿವೆ ಎಂದರು.

ಪ್ರತಿ ವ್ಯಕ್ತಿಯ ಹೃದಯದಲ್ಲಿ ದೇವರಿದ್ದು, ನಾವು ಮಾಡುವ ಭಕ್ತಿಯಲ್ಲಿ ದೇವರನ್ನು ಕಾಣಲು ಸಾಧ್ಯ. ಆಧ್ಯಾತ್ಮಿಕ ಮತ್ತು ಸತ್ಸಂಗಗಳಲ್ಲಿ ಭಾಗವಹಿಸಿ ಬದುಕಿನಲ್ಲಿ ಶಾಂತಿ, ನೆಮ್ಮದಿಯನ್ನು ಪ್ರಾಪ್ತಿ ಪಡಿಸಿಕೊಳ್ಳುವುದು ಅವಶ್ಯವಿದೆ ಎಂದರು.

ಕೈವಲ್ಯಾಶ್ರಮದ ನಿಜಗುಣ ದೇವರು, ಮಾಜಿ ಶಾಸಕರಾದ ಡಿ.ಆರ್. ಪಾಟೀಲ, ಜಿ.ಟಿ. ಪಾಟೀಲ, ಮಹಾಂತೇಶ ಕವಟಗಿಮಠ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT