ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷ್ಣಾ, ವೇದಗಂಗಾ, ಹಿರಣ್ಯಕೇಶಿ ನದಿಗೆ ಶೀಘ್ರ ನೀರು ಹರಿಸಲು ಮನವಿ

Published 30 ಮಾರ್ಚ್ 2024, 16:17 IST
Last Updated 30 ಮಾರ್ಚ್ 2024, 16:17 IST
ಅಕ್ಷರ ಗಾತ್ರ

ನಿಪ್ಪಾಣಿ: ಮಹಾರಾಷ್ಟ್ರದಿಂದ ರಾಜ್ಯಕ್ಕೆ ಹರಿಯುವ ನದಿಗಳಿಗೆ ನೀರು ಬಿಡಬೇಕೆಂದು ಸಂಸದ ಅಣ್ಣಾಸಾಹೇಬ ಜೊಲ್ಲೆ ಮತ್ತು ಶಾಸಕಿ ಶಶಿಕಲಾ ಜೊಲ್ಲೆ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಗೆ ಒತ್ತಾಯಿಸಿದರು.

ಮುಂಬೈನಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಶನಿವಾರ ಭೇಟಿಯಾಗಿ ಮನವಿ ಸಲ್ಲಿಸಿದರು.

ಸಕಾರಾತ್ಮಕವಾಗಿ ಸ್ಪಂದಿಸಿದ ದೇವೇಂದ್ರ ಫಡ್ನವೀಸ್, ಕೋಯ್ನಾ ಮತ್ತು ವಾರಣಾ ಜಲಾಶಯಗಳಿಂದ ವೇದಗಂಗಾ ಹಾಗೂ ಕೃಷ್ಣಾ ನದಿಗೆ 3 ಟಿಎಂಸಿ ನೀರು ಮತ್ತು ಚಿತ್ರಾ ಆಣೆಕಟ್ಟಿನಿಂದ ಹಿರಣ್ಯಕೇಶಿಗೆ 1 ಟಿಎಂಸಿ ನೀರು ಬಿಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆಂದು ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದ್ದಾರೆ.

ಮಾಜಿ ಸಚಿವ ಶ್ರೀಮಂತ ಪಾಟೀಲ, ಶಾಸಕ ದುರ್ಯೋಧನ ಐಹೊಳೆ, ನಿಖಿಲ್‌ ಕತ್ತಿ, ರೈತ ಮೋರ್ಚಾ ಅಧ್ಯಕ್ಷ ಎಸ್. ಮುದಕಣ್ಣವರ, ಮೊದಲಾದವರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT