ನಿಪ್ಪಾಣಿ: ‘ಜಗಜ್ಯೋತಿ ಬಸವೇಶ್ವರರ ವಚನಗಳಲ್ಲಿ ಬದುಕಿಗೆ ಬೇಕಾದ ಎಲ್ಲ ಸಂದೇಶಗಳಿವೆ. ಅವುಗಳನ್ನು ನಮ್ಮ ಬದುಕಿನ ಆದರ್ಶವಾಗಿಸಿಕೊಂಡು ಜೀವನ ಸಾಗಿಸಲು ಮುಂದಾಗಬೇಕು. ಛತ್ರಪತಿ ಶಿವಾಜಿ ಮಹಾರಾಜರು ಸಮ ಸಮಾಜಕ್ಕಾಗಿ ಶ್ರದ್ಧೆ, ನಿಷ್ಠೆ ಹಾಗೂ ಪ್ರಾಮಾಣಿಕವಾಗಿ ಶ್ರಮಿಸಿದ್ದು, ಅವರ ಶೌರ್ಯ, ಸಾಹಸ, ಪರಾಕ್ರಮ, ಕೆಚ್ಚೆದೆಯ ಹೋರಾಟಗಳು ಸರ್ವರಿಗೂ ಮಾದರಿ’ ಎಂದು ಬಿಡಿಸಿಸಿ ಅಧ್ಯಕ್ಷ ಅಣ್ಣಾಸಾಹೇಬ ಜೊಲ್ಲೆ ಹೇಳಿದರು.

ಸ್ಥಳೀಯ ಹಾಲಸಿದ್ಧನಾಥ ಸಹಕಾರ ಸಕ್ಕರೆ ಕಾರ್ಖಾನೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಶಿವಾಜಿ ಹಾಗೂ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಹಾತ್ಮಾ ಬಸವೇಶ್ವರ ಮತ್ತು ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಿ ಅವರು ಮಾತನಾಡಿದರು.

ಶಾಸಕಿ ಶಶಿಕಲಾ ಜೊಲ್ಲೆ ಮಾತನಾಡಿ, ‘ಹುಟ್ಟಿನಿಂದ ಯಾರೂ ಶ್ರೇಷ್ಠರಲ್ಲ. ನಡೆ ನುಡಿಯಿಂದ ಮಾತ್ರ ಶ್ರೇಷ್ಠರಾಗಲು ಸಾಧ್ಯ ಎನ್ನುವುದಕ್ಕೆ ಎಲ್ಲರನ್ನೂ ಸಮಾನವಾಗಿ ಕಂಡ ಮಹಾಪುರುಷ ಬಸವೇಶ್ವರರು ಸಾಕ್ಷಿ. ಶಿವಾಜಿ ಮಹಾರಾಜರು ಅನ್ಯಾಯದ ವಿರುದ್ಧ ಹೋರಾಟ ಮಾಡಿದ ಧೀಮಂತ ನಾಯಕರು. ಹಿಂದೂಗಳು ಹಾಗೂ ದಲಿತರಿಗೆ ಹಿಂಸೆ ಕೊಡುತ್ತಿದ್ದ ಪರಕೀಯರ ವಿರುದ್ಧ ಸಿಡಿದೆದ್ದು ಹೋರಾಡಿದರು. ಮಹಿಳೆಯರಿಗೆ ಪೂಜ್ಯ ಸ್ಥಾನ ನೀಡಿ ಸರ್ವಧರ್ಮ ಸಮನ್ವಯತೆಗಾಗಿ ಹೋರಾಡಿದ ಶೂರರು’ ಎಂದು ಹೇಳಿದರು.

ಕಾರ್ಖಾನೆಯ ಅಧ್ಯಕ್ಷ ಮಲಗೊಂಡಾ ಪಾಟೀಲ, ಸಂಚಾಲಕ ಅವಿನಾಶ ಪಾಟೀಲ, ಪ್ರಕಾಶ ಶಿಂಧೆ, ಸಮಿತ ಸಾಸನೆ, ರಾವಸಾಹೇಬ ಫರಾಳೆ, ಜಯವಂತ ಭಾಟಲೆ, ರಮೇಶ ಪಾಟೀಲ, ಸುಹಾಸ ಗೂಗೆ, ರಾಮಗೊಂಡಾ ಚೌಗುಲೆ, ಸಂಚಾಲಕ ಶ್ರೀಕಾಂತ ಬನ್ನೆ, ಗಜಾನನ ರಾಮನಕಟ್ಟಿ, ಪ್ರಧಾನ ವ್ಯವಸ್ಥಾಪಕ ಕೆ.ಎನ್. ಗಿಜವಣೆ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-21-589534486

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.