ಶನಿವಾರ, ಅಕ್ಟೋಬರ್ 1, 2022
23 °C

ನಿಪ್ಪಾಣಿ: ದೇವಸ್ಥಾನಕ್ಕೆ ನುಗ್ಗಿದ ನೀರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನಿಪ್ಪಾಣಿ (ಬೆಳಗಾವಿ ಜಿಲ್ಲೆ): ಕೊಂಕಣ ಭಾಗದಲ್ಲಿ ಸತತ ವಾಗಿ ಮಳೆಯಾಗುತ್ತಿರುವುದರಿಂದ ತಾಲ್ಲೂಕಿನ ಎಲ್ಲ ಸೇತುವೆಗಳು ಎರಡನೇ ಬಾರಿ ಜಲಾವೃತಗೊಂಡಿವೆ. ಸೋಮವಾರ ಕಾರದಗಾ-ಭೋಜ ಸೇತುವೆಯೂ ಜಲಾವೃತಗೊಂಡು ಸಂಚಾರ ಸ್ಥಗಿತಗೊಂಡಿದೆ.

ತಾಲ್ಲೂಕಿನ ಹುನ್ನರಗಿ ಗ್ರಾಮದ ಲಕ್ಷ್ಮೀ-ನಾರಾಯಣ ಮಂದಿರದಲ್ಲಿ ವೇದಗಂಗಾ ನದಿ ನೀರು ನುಗ್ಗಿದೆ.

ವೇದಗಂಗಾ ಮತ್ತು ದೂಧಗಂಗಾ ನದಿಗಳಲ್ಲಿ ನೀರಿನ ಹರಿವು ಹೆಚ್ಚಾಗಿ ನೂರಾರು ಎಕರೆ ಹೊಲಗದ್ದೆಗಳಲ್ಲಿ ನೀರು ನುಸುಳಿ ರೈತರು ಅಪಾರ ಹಾನಿ ಎದುರಿಸುವ ಸಂಕಷ್ಟ ಬಂದೊದಗಿದೆ. ಹೊಲಗದ್ದೆಗಳಲ್ಲಿ ನೀರು ನಿಂತು ಕೆರೆಯಂತಾಗಿದೆ.

ಸ್ಥಳೀಯ ಲೋಕೋಪಯೋಗಿ ಇಲಾಖೆಯಲ್ಲಿ 39.2 ಮಿ.ಮೀ., ಎಆರ್‌ಎಸ್‍ನಲ್ಲಿ 40 ಮಿ.ಮೀ., ತಾಲ್ಲೂಕಿನ ಸೌಂದಲಗಾ ಗ್ರಾಮದಲ್ಲಿ 38.1 ಮಿ.ಮೀ. ಮತ್ತು ಗಳತಗಾ ಗ್ರಾಮದಲ್ಲಿ 30 ಮಿ.ಮೀ. ಮಳೆ ಪ್ರಮಾಣ ನೋಂದಾಯಿಸಲಾಗಿದೆ. ಕಳೆದ 24 ಗಂಟೆಯಲ್ಲಿ 147.3 ಮಿ.ಮೀ. ಸುರಿದಿದ್ದು ಇಲ್ಲಿಯವರೆಗೆ 1686.6 ಮಿ.ಮೀ. ಮಳೆ ಬಿದ್ದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು