ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಕಾರ್ಮಿಕರ ಮುಷ್ಕರ ನಾಳೆ

Last Updated 7 ಜನವರಿ 2020, 14:06 IST
ಅಕ್ಷರ ಗಾತ್ರ

ಬೆಳಗಾವಿ: ಕಾರ್ಮಿಕರು, ಜನಸಾಮಾನ್ಯರು ಮತ್ತು ರಾಷ್ಟ್ರೀಯ ಹಿತಾಸಕ್ತಿಗೆ ಮಾರಕವಾದ ನಿಲುವು ತಳೆದಿರುವ ಕೇಂದ್ರ ಸರ್ಕಾರದ ಧೋರಣೆ ವಿರೋಧಿಸಿ ಕಾರ್ಮಿಕ ಸಂಘಟನೆಗಳು ದೇಶದಾದ್ಯಂತ ಕರೆ ನೀಡಿರುವ ಮುಷ್ಕರ ಬೆಂಬಲಿಸಿ, ನಗರ ಹಾಗೂ ಜಿಲ್ಲೆಯಲ್ಲೂ ಸಂಘಟನೆಗಳ ಸದಸ್ಯರು ಪ್ರತಿಭಟನೆ ನಡೆಸಲಿದ್ದಾರೆ. ಬಂದ್‌ ಇರುವುದಿಲ್ಲವಾದ್ದರಿಂದ, ಜನಜೀವನಕ್ಕೆ ತೊಂದರೆಯಾಗುವ ಸಾಧ್ಯತೆ ಇಲ್ಲ.

ಶಾಲಾ–ಕಾಲೇಜುಗಳಿಗೆ ರಜೆ ಘೋಷಿಸಿಲ್ಲ. ಸಾರಿಗೆ ಸಂಚಾರ ಸುಗಮವಾಗಿರಲಿದೆ. ಎಐಟಿಯುಸಿ, ಸಿಐಟಿಯು ಸೇರಿ ವಿವಿಧ ಸಂಘಟನೆಗಳಿಂದ ಪ್ರತಿಭಟ‌ನಾ ಮೆರವಣಿಗೆಯಷ್ಟೇ ಇರಲಿದೆ. ಬ್ಯಾಂಕಿಂಗ್‌ ಸೇವೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.

ಸಂಭಾಜಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಯಲಿದೆ. ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿ ಮುಖಂಡರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಿದ್ದಾರೆ. ಕೆ‌ಎಸ್‌ಆರ್‌ಟಿಸಿ ನೌಕರರ ಸಂಘ, ಅಂಗನವಾಡಿ ನೌಕರರ ಸಂಘ, ಕೆಲವು ಕನ್ನಡಪರ ಸಂಘಟನೆಗಳು ಮುಷ್ಕರಕ್ಕೆ ಬೆಂಬಲ ಸೂಚಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT