ಸೋಮವಾರ, ಮಾರ್ಚ್ 20, 2023
30 °C

ಪ್ರಯಾಣ ದರ ಹೆಚ್ಚಿಸುವುದಿಲ್ಲ: ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಥಣಿ (ಬೆಳಗಾವಿ ಜಿಲ್ಲೆ): ‘ಸರ್ಕಾರಿ ಸಾರಿಗೆ ಸಂಸ್ಥೆಗಳ ಬಸ್‌ಗಳ ಪ್ರಯಾಣ ದರ ಹೆಚ್ಚಳ ಮಾಡುವುದಿಲ್ಲ’ ಎಂದು ಸಾರಿಗೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದರು.

ಇಲ್ಲಿ ಪತ್ರಕರ್ತರೊಂದಿಗೆ ಸೋಮವಾರ ಮಾತನಾಡಿದ ಅವರು, ‘ಕೋವಿಡ್ ಪರಿಸ್ಥಿತಿಯಿಂದಾಗಿ ಸಾರಿಗೆ ಸಂಸ್ಥೆಗಳಿಗೆ ಬಹಳ ನಷ್ಟವಾಗಿದೆ. ಡೀಸೆಲ್‌ ಬೆಲೆಯೂ ಏರಿಕೆಯಾಗಿದೆ. ಈ ನಡುವೆಯೂ ಜನಸಾಮಾನ್ಯರ ಮೇಲೆ ಹೊರೆ ಹಾಕಲು ಬಯಸುವುದಿಲ್ಲ. ಪ್ರಯಾಣ ದರದಲ್ಲಿ ಸದ್ಯಕ್ಕೆ ಯಾವುದೇ ಬದಲಾವಣೆ ಇಲ್ಲ’ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.