ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಪುತ್ರ, ಕೆಎಂಎಫ್ ನಿರ್ದೇಶಕರೂ ಆಗಿರುವ ಅಮರನಾಥ ಜಾರಕಿಹೊಳಿ ಸ್ಪರ್ಧಿಸಲಿದ್ದಾರೆ ಎಂಬ ವದಂತಿಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ಬಗ್ಗೆ ಸ್ವತಃ ಅಮರನಾಥ್ ಸ್ಪಷ್ಟನೆ ನೀಡಿದ್ದಾರೆ.

ಮಾಧ್ಯಮಕ್ಕೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಅಭ್ಯರ್ಥಿಯಾಗಲು ಮನಸ್ಸಿಲ್ಲ ಎಂದಿದ್ದಾರೆ.

'ನಾನು ವಯಸ್ಸಿನಲ್ಲಿ ತುಂಬಾ ಚಿಕ್ಕವನು. ಇತ್ತೀಚೆಗಷ್ಟೇ ಭಾರತೀಯ ಜನತಾ ಪಾರ್ಟಿ ಸೇರಿದ್ದೇನೆ. ಪಕ್ಷದ ಕಾರ್ಯಕರ್ತನಾಗಿ ಇನ್ನೂ ಸಾಕಷ್ಟು ಕೆಲಸ ಮಾಡುವ ಮನಸ್ಸಿದೆ. ನನ್ನ ತಂದೆ ರಮೇಶ ಜಾರಕಿಹೊಳಿ ರಾಜ್ಯ ಸರ್ಕಾರದಲ್ಲಿ ಸಚಿವರಾಗಿದ್ದಾರೆ. ಗೋಕಾಕ ಕ್ಷೇತ್ರದ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ ; ಸಮಸ್ಯೆಗಳನ್ನು ಪರಿಹರಿಸುವ ಗುರುತರ ಜವಾಬ್ದಾರಿ ನನ್ನ ಮೇಲಿದೆ. ಕೇಂದ್ರ ಸಚಿವರಾಗಿದ್ದ ದಿ. ಸುರೇಶ ಅಂಗಡಿ ಅವರು ಸಾಕಷ್ಟು ಜನೋಪಯೋಗಿ ಕಾರ್ಯಗಳನ್ನು ಮಾಡಿದ್ದಾರೆ. ಅವುಗಳನ್ನು ಮುಂದುವರಿಸಿಕೊಂಡು ಹೋಗುವ ಸಲುವಾಗಿ ಈ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಬಹುಮತದಿಂದ ಆಯ್ಕೆ ಮಾಡುವ ಜವಾಬ್ದಾರಿ ನನ್ನಂತಹ ಪ್ರತಿಯೊಬ್ಬ ಕಾರ್ಯಕರ್ತನ ಮೇಲಿದೆ' ಎಂದಿದ್ದಾರೆ.

'ಸಾಮಾಜಿಕ ಜಾಲತಾಣಗಳಲ್ಲಿ ನನ್ನ ಬಗ್ಗೆ ಟ್ರೋಲ್ ಆಗುತ್ತಿರುವ ವಿಷಯಗಳನ್ನು ಗಮನಿಸಿದ್ದೇನೆ.ನನ್ನ ಸ್ನೇಹಿತರು, ಆಪ್ತರು ಮತ್ತು ಕಾರ್ಯಕರ್ತರ ಮನದಾಳವನ್ನು ಅರಿತಿದ್ದೇನೆ. ರಾಜಕೀಯವಾಗಿ ಬೆಳೆಯಲು ನನಗೆ ಬೇಕಾದಷ್ಟು ಸಮಯವಿದೆ. ಸುರೇಶ ಅಂಗಡಿ ಅವರ ಕುಟುಂಬಕ್ಕೆ ಅನ್ಯಾಯವಾಗಲು ನಾವು ಬಿಡುವುದಿಲ್ಲ ಮತ್ತು ಯಾವುದೇ ಕಾರಣಕ್ಕೂ ಅಭ್ಯರ್ಥಿ ಆಗುವ ಮನಸ್ಸು ನನಗಿಲ್ಲ. ನಾನು ಎಲ್ಲಾ ಕಾರ್ಯಕರ್ತರಂತೆ ಟೊಂಕ ಕಟ್ಟಿ ನಿಂತು ಬಿಜೆಪಿ ಅಭ್ಯರ್ಥಿ ಗೆಲ್ಲಿಸಲು ದುಡಿಯುತ್ತೇನೆ' ಎಂದಿದ್ದಾರೆ.

'ಶ್ಯಾಮ್ ಪ್ರಸಾದ್ ಮುಖರ್ಜಿ, ದೀನ್‌ದಯಾಳ್ ಉಪಾಧ್ಯಾಯರಂತಹ ರಾಷ್ಟ್ರಭಕ್ತರು ಸ್ಥಾಪಿಸಿದ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತ ನಾನು ಎಂದು ಹೇಳಿಕೊಳ್ಳಲು ಹೆಮ್ಮೆ ಅನಿಸುತ್ತದೆ. ಕಾರ್ಯಕರ್ತರೆಲ್ಲಾ ಒಟ್ಟಾಗಿ ಕೆಲಸ ಮಾಡಿ ಪ್ರಧಾನಿ ಮೋದಿ ಅವರಿಗೆ ಇನ್ನಷ್ಟು ಶಕ್ತಿ ತುಂಬುತ್ತೇವೆ' ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.