ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರದಲ್ಲಿರುವ ಕಾರ್ಮಿಕರಿಗೆ ರೈಲು ಸೇವೆ ಇಲ್ಲ: ಸಚಿವ ಸುರೇಶ್‌ ಅಂಗಡಿ

Last Updated 3 ಮೇ 2020, 11:05 IST
ಅಕ್ಷರ ಗಾತ್ರ

ಬೆಳಗಾವಿ: ‘ಕೋವಿಡ್–19 ಪ್ರಕರಣಗಳು ಹೆಚ್ಚಿನ ಪ್ರಮಾಣದಲ್ಲಿ ಕಾಣಿಸಿಕೊಂಡಿರುವುದರಿಂದ ಮಹಾರಾಷ್ಟ್ರದಲ್ಲಿರುವ ಕಾರ್ಮಿಕರು ರಾಜ್ಯಕ್ಕೆ ಬರುವುದಕ್ಕೆ ಅವಕಾಶವಿಲ್ಲ. ಹೀಗಾಗಿ, ಅವರಿಗೆ ರೈಲು ಸೇವೆ ಒದಗಿಸುವುದಿಲ್ಲ’ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ತಿಳಿಸಿದರು.

ಇಲ್ಲಿ ಭಾನುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ವಲಸೆ ಕಾರ್ಮಿಕರನ್ನು ಅವರವರ ರಾಜ್ಯಕ್ಕೆ ಕಳುಹಿಸಲು ಅನುಮತಿ ನೀಡಿ ಕೇಂದ್ರ ಗೃಹ ಇಲಾಖೆ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ. ರೈಲಿನಲ್ಲಿ ವಲಸೆ ಕಾರ್ಮಿಕರನ್ನು ಅವರವರ ರಾಜ್ಯಕ್ಕೆ ಕಳುಹಿಸಲಾಗುವುದು. ಇದನ್ನು ನೋಡಿಕೊಳ್ಳಲು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ’ ಎಂದು ಹೇಳಿದರು.

‘ಕಾರ್ಮಿಕರ ಆರೋಗ್ಯ ತಪಾಸಣೆಯನ್ನು ಸಂಬಂಧಿಸಿದ ರಾಜ್ಯ ಸರ್ಕಾರಗಳು ಮಾಡಬೇಕು. ಪ್ರಯಾಣದ ವೆಚ್ಚವನ್ನೂ ರಾಜ್ಯಗಳೇ ಭರಿಸಬೇಕು. ರಾಜಸ್ಥಾನದಿಂದ 16 ಸಾವಿರ ಕಾರ್ಮಿಕರು ಈಗಾಗಲೇ ನೋಂದಣಿ ಮಾಡಿದ್ದಾರೆ. ಬೇಡಿಕೆ ಅನುಸಾರ ರೈಲು ಓಡಿಸುತ್ತೇವೆ. ನಮ್ಮ ರಾಜ್ಯ ಸರ್ಕಾರದಿಂದಲೂ ರೈಲು ಇಲಾಖೆಗೆ ಪತ್ರ ಬಂದಿದೆ. ಇದನ್ನು ಕೇಂದ್ರ ಆರೋಗ್ಯ ಇಲಾಖೆ ಹಾಗೂ ವಿಪತ್ತು ನಿರ್ವಹಣಾ ತಂಡದವರು ನಿರ್ವಹಣೆ ಮಾಡಲಿದ್ದಾರೆ’ ಎಂದು ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT