ಬುಧವಾರ, ಜೂಲೈ 8, 2020
21 °C

ಬೆಳಗಾವಿ: ಸ್ಟ್ರೆಚ್ಚರ್‌ನಲ್ಲಿ ಕರೆದೊಯ್ಯುವ ಬದಲಿಗೆ ಎತ್ತಿಕೊಂಡೇ ಸಾಗಿಸಿದರು!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬೆಳಗಾವಿ: ಇಲ್ಲಿನ ಜಿಲ್ಲಾಸ್ಪತ್ರೆ ಆವರಣದಲ್ಲಿ ಗ್ಲೂಕೋಸ್ ಬಾಟಲಿ ಹಾಕಿದ್ದ ಬಾಲಕನನ್ನು ಕಂಕುಳಲ್ಲಿ ಎತ್ತಿಕೊಂಡು ಸಾಗಿಸಿದ ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಜ್ವರದಿಂದ ಬಳಲುತ್ತಿದ್ದ ಬಾಲಕನನ್ನು ಕುಟುಂಬದವರು ಎಮರ್ಜೆನ್ಸಿ ವಾರ್ಡ್‌ನಿಂದ ಮಕ್ಕಳ ವಾರ್ಡ್‌ವರೆಗೆ ಅಂದರೆ ಸುಮಾರು 500 ಮೀಟರ್‌ವರೆಗೆ ಎತ್ತಿಕೊಂಡೇ ಸಾಗಿಸಿದ್ದಾರೆ. ವ್ಯಕ್ತಿಯೊಬ್ಬರು ಇದನ್ನು ವಿಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

ಆಸ್ಪತ್ರೆಯಲ್ಲಿ ಸ್ಟ್ರೆಚ್ಚರ್ ಕೊರತೆ ಇದೆಯೇ ಎನ್ನುವ ಅನುಮಾನವೂ ವ್ಯಕ್ತವಾಗುತ್ತಿದೆ. ಪ್ರತಿಕ್ರಿಯೆಗೆ ಬಿಮ್ಸ್ ನಿರ್ದೇಶಕರು ಲಭ್ಯವಾಗಲಿಲ್ಲ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು