ಗುರುವಾರ , ಆಗಸ್ಟ್ 5, 2021
23 °C

ಸಾಮಾನ್ಯ ಕಾಯಿಲೆಗಳಿಗೆ ಚಿಕಿತ್ಸೆ: ಸಚಿವರಿಗೆ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ನಗರವೂ ಸೇರಿದಂತೆ ಜಿಲ್ಲೆಯಲ್ಲಿ ಮಳೆಗಾಲದ ಸಾಮಾನ್ಯ ಕಾಯಿಲೆಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸಿಗುವಂತೆ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.

‘ಸಣ್ಣ ಪುಟ್ಟ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಖಾಸಗಿ ಆಸ್ಪತ್ರೆಗಳು ನಿರಾಕರಿಸುತ್ತಿವೆ. ಅನೇಕ ವೈದ್ಯರು ಕ್ಲಿನಿಕ್‌ಗಳನ್ನು ಬಂದ್ ಮಾಡುತ್ತಿದ್ದಾರೆ. ಹೀಗಾದರೆ ಸಾಮಾನ್ಯರು ಸಾಯುವ ಸ್ಥಿತಿ ಬರುತ್ತದೆ. ಕನ್ನಡ ಹೋರಾಟಗಾರ್ತಿ ಜುಲೈ 15ರಂದು ನಿಧನರಾದರು. ಖಾಸಗಿ ಆಸ್ಪತ್ರೆಯವರು ಅವರಿಗೆ ತುರ್ತಾಗಿ ಚಿಕಿತ್ಸೆ ನೀಡದೇ ಜಿಲ್ಲಾ ಆಸ್ಪತ್ರೆಯಿಂದದ ‘ನೋ ಕೋವಿಡ್’ ಪ್ರಮಾಣಪತ್ರ ತರಲು ಹೇಳಿದ್ದರು. ತರಲು ವಿಳಂಬವಾಗಿದ್ದರಿಂದ ಅವರು ಮೃತರಾದರು’ ಎಂದು ದೂರಿದರು.

‘ಹಲವರು ಇಂತಹ ಸಮಸ್ಯೆ ಎದುರಿಸಿದ್ದಾರೆ. ಎರಡು–ಮೂರು ಆಸ್ಪತ್ರೆಗಳು ಚಿಕಿತ್ಸೆ ನೀಡದೇ ವಾಪಸ್ ಕಳುಹಿಸಿದ್ದರಿಂದ ಹೋಟೆಲ್‌ ಉದ್ಯಮಿಯೊಬ್ಬರು ಸಾವಿಗೀಡಾದರು. ಕ್ಲಿನಿಕ್‌ ಬಂದ್ ಮಾಡಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಪರವಾನಗಿ ರದ್ದುಗೊಳಿಸಿ ಬಿಸಿ ಮುಟ್ಟಿಸಬೇಕು. ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು’ ಎಂದು ಒತ್ತಾಯಿಸಿದರು.

ಪ್ರತಿಕ್ರಿಯಿಸಿದ ಸಚಿವರು, ‘ಖಾಸಗಿ ಆಸ್ಪತ್ರೆಗಳು ಕಾರ್ಯನಿರ್ವಹಿಸುವಂತೆ ತಾಕೀತು ಮಾಡಲಾಗುವುದು’ ಎಂದು ಭರವಸೆ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು