ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತಿಥಿ ಶಿಕ್ಷಕರ ನೇಮಕಾತಿಗೆ ಸೂಚನೆ

Published 8 ಜೂನ್ 2024, 15:02 IST
Last Updated 8 ಜೂನ್ 2024, 15:02 IST
ಅಕ್ಷರ ಗಾತ್ರ

ಖಾನಾಪುರ: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ತಾಲ್ಲೂಕಿನ ವಿವಿಧ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕ ಹುದ್ದೆಗಳಿಗೆ ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳುವಂತೆ ಮುಖ್ಯ ಶಿಕ್ಷಕರಿಗೆ ಶನಿವಾರ ಬಿಇಒ ರಾಜೇಶ್ವರಿ ಕುಡಚಿ ಆದೇಶಿಸಿದ್ದಾರೆ.

ಈ ಕುರಿತು ಹೊರಡಿಸಿರುವ ಜ್ಞಾಪನದಲ್ಲಿ ಅತಿಥಿ ಶಿಕ್ಷಕರ ನೇಮಕದ ಕುರಿತು ವಿವರಿಸಿರುವ ಅವರು, ತಾಲ್ಲೂಕಿನಲ್ಲಿ ಕನ್ನಡ ಮಾಧ್ಯಮದ 111, ಮರಾಠಿ ಮಾಧ್ಯಮದ 108, ಉರ್ದು ಮಾಧ್ಯಮದ 4 ಮತ್ತು ಇಂಗ್ಲಿಷ್ ಭಾಷಾ ಶಿಕ್ಷಕರು 6 ಸೇರಿದಂತೆ ಒಟ್ಟು 229 ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಆದೇಶ ನೀಡಿದ್ದು, ಅದರಂತೆ ಮಕ್ಕಳ ಸಂಖ್ಯೆಗನುಗುಣವಾಗಿ ಅತಿಥಿ ಶಿಕ್ಷಕರ ನೇಮಕಾತಿಗೆ ಮುಂದಾಗುವಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT