ಬೆಳಗಾವಿ: ನಗರದಲ್ಲಿ ನಿಯಮಾವಳಿ ಮೀರಿ ಅಕ್ರಮವಾಗಿ ಕಟ್ಟಡ ನಿರ್ಮಿಸಿದ ಅನಧಿಕೃತ ಕಟ್ಟಡಗಳನ್ನು ಗುರುತಿಸಿ ನಿಯಮಾವಳಿ ನೋಟಿಸ್ ನೀಡಿ, ಅಂತಹ ಕಟ್ಟಡಗಳನ್ನು ತೆರವುಗೊಳಿಸಬೇಕು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಇಲ್ಲಿನ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಶುಕ್ರವಾರ ನಡೆದ ನಗರಾಭಿವೃದ್ಧಿ ಪ್ರಾಧಿಕಾರದ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮೂರು ಅಂತಸ್ತುಗಳ ಕಟ್ಟಡ ನಿರ್ಮಾಣಕ್ಕೆ ಪಾಲಿಕೆಯ ವತಿಯಿಂದ ಅನುಮತಿ ಪಡೆದುಕೊಂಡು ಆರು ಅಂತಸ್ತುಗಳ ಕಟ್ಟಡ ನಿರ್ಮಿಸಿದ ಪ್ರಕರಣವನ್ನು ಪ್ರಸ್ತಾಪಿಸಿದ ಅವರು, ಇಂತಹ ಅಕ್ರಮಗಳನ್ನು ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.ಅನಧಿಕೃತ ಬಡಾವಣೆಗಳಿಗೆ ಕಡಿವಾಣ ಹಾಕಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಬುಡಾ ಆಸ್ತಿಗಳಿಗೆ ಬೇಲಿ ಹಾಕಿ ಫಲಕ ಅಳವಡಿಸುವ ಮೂಲಕ ಅತಿಕ್ರಮಣ ತಡೆಗಟ್ಟಬೇಕು. ಇದರಿಂದ ಆಸ್ತಿ ಸಂರಕ್ಷಣೆ ಸಾಧ್ಯವಾಗಲಿದೆ ಎಂದು ಶಾಸಕ ಅನಿಲ್ ಬೆನಕೆ ಅಧಿಕಾರಿಗಳಿಗೆ ತಿಳಿಸಿದರು.

ಕಣಬರ್ಗಿ ಯೋಜನೆ ಶೀಘ್ರ ಅನುಷ್ಠಾನ: ಕಣಬರ್ಗಿಯಲ್ಲಿ ರೂಪಿಸಲಾಗಿರುವ 157 ಎಕರೆ ವಸತಿ ಯೋಜನೆಗೆ ಸರ್ಕಾರದಿಂದ ತಕ್ಷಣವೇ ಅನುಮೋದನೆ ನೀಡಿ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದು ಸಚಿವರು ಹೇಳಿದರು.

ಬೆಳಗಾವಿ ಸೇರಿದಂತೆ ಎಲ್ಲ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಅಕ್ರಮ ಕಟ್ಟಡ ನಿರ್ಮಾಣಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮಾರ್ಗಸೂಚಿ ರೂಪಿಸುವಂತೆ ಶಾಸಕ ಅಭಯ ಪಾಟೀಲ ಸಲಹೆ ನೀಡಿದರು.

ನಗರದಲ್ಲಿ ತೆರವುಗೊಳಿಸಲಾಗಿರುವ 40 ಅನಧಿಕೃತ ಬಡಾವಣೆಗಳ ಆಸ್ತಿಯನ್ನು ಸರ್ಕಾರದ ವಶಕ್ಕೆ ಪಡೆದುಕೊಳ್ಳಲು ಅವಕಾಶಗಳಿವೆ. ಈ ನಿಟ್ಟಿನಲ್ಲಿ ಕ್ರಮ ಕೈಗೊಂಡರೆ ಮುಂಬರುವ ದಿನಗಳಲ್ಲಿ ಅನಧಿಕೃತ ಬಡಾವಣೆಗಳ ನಿರ್ಮಾಣಕ್ಕೆ ಕಡಿವಾಣ ಹಾಕಬಹುದು ಎಂದು ಹೇಳಿದರು.

ಬುಡಾ ವಸತಿಯಿಂದ 19 ವಸತಿ ವಿನ್ಯಾಸ ರೂಪಿಸಿ ನಿವೇಶನ ಹಂಚಿಕೆ ಮಾಡಲಾಗಿದೆ ಎಂದು ಬುಡಾ ಆಯುಕ್ತ ಪ್ರೀತಂ ನಸಲಾಪುರೆ ವಿವರಿಸಿದರು.

ಕೆಯುಐಡಿಎಫ್‌ಸಿ ಅಧ್ಯಕ್ಷ ಶಂಕರ ಪಾಟೀಲ ಮುನೇನಕೊಪ್ಪ, ಕೆಯುಡಬ್ಲ್ಯುಸಿ ನಿರ್ದೇಶಕಿ ದೀಪಾ ಕುಡಚಿ, ಬುಡಾ ಅಧ್ಯಕ್ಷ ಘೂಳಪ್ಪ ಹೊಸಮನಿ, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಪಾಲಿಕೆಯ ಆಯುಕ್ತ ಕೆ.ಎಚ್. ಜಗದೀಶ್, ಸ್ಮಾರ್ಟಿ ಸಿಟಿ ವ್ಯವಸ್ಥಾಪಕ ನಿರ್ದೇಶಕ ಶಶಿಧರ ಕುರೇರ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.