ಶುಕ್ರವಾರ, ಸೆಪ್ಟೆಂಬರ್ 17, 2021
29 °C

ಬೆಳಗಾವಿ ಪಾಲಿಕೆ ಚುನಾವಣೆ: ಅಧಿಸೂಚನೆ ಪ್ರಕಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಇಲ್ಲಿನ ಮಹಾನಗರ ಪಾಲಿಕೆಯ ಸಾರ್ವತ್ರಿಕ ಚುನಾವಣೆಗೆ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಸೋಮವಾರ ಅಧಿಸೂಚನೆ ಪ್ರಕಟಿಸಿದ್ದಾರೆ.

ಮೊದಲ ದಿನದಿಂದಲೇ ನಾಮಪತ್ರ ಸಲ್ಲಿಕೆಗೆ ಅವಕಾಶವಿತ್ತು. ಆದರೆ, ಯಾರೂ ಸಲ್ಲಿಸಿಲ್ಲ. ನಾಮಪತ್ರ ಸಲ್ಲಿಕೆಗೆ ಆ. 23 ಕೊನೆಯ ದಿನವಾಗಿದೆ. ಆ.24ರಂದು ಪರಿಶೀಲನೆ ನಡೆಯಲಿದೆ. ಆ.26ರಂದು ಹಿಂಪಡೆಯಲು ಕೊನೆಯ ದಿನವಾಗಿದೆ. ಸೆ. 3ರಂದು ಮತದಾನ ಹಾಗೂ ಅಗತ್ಯಬಿದ್ದರೆ ಮರು ಮತದಾನವನ್ನು ಸೆ.5ರಂದು ನಡೆಸಲಾಗುತ್ತದೆ. ಸೆ.6ರಂದು ಮತ ಎಣಿಕೆ ನಡೆಯಲಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ವಿಶ್ವೇಶ್ವರಯ್ಯ ನಗರ ಉಪ ವಿಭಾಗ ಕಚೇರಿ, ಅಶೋಕ ನಗರ, ಮಹಾನಗರ ಪಾಲಿಕೆ ಮುಖ್ಯ ಕಚೇರಿ, ಕೋನವಾಳ ಗಲ್ಲಿ, ಗೋವಾವೇಸ್ ವೃತ್ತದ ಪಾಲಿಕೆ ಸಂಕೀರ್ಣದಲ್ಲಿ ಬೆಳಿಗ್ಗೆ 11ರಿಂದ ಮಧ್ಯಾಹ್ನ 3ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ನೀಡಲಾಗಿದೆ. ಆಯಾ ವಾರ್ಡ್‌ಗಳಿಗೆ ಸಂಬಂಧಿಸಿದಂತೆ ಈ ಸ್ಥಳದಲ್ಲಿ ನಾಮಪತ್ರ ಸಲ್ಲಿಸಬಹುದಾಗಿದೆ. ನಿಯೋಜಿತ ಅಧಿಕಾರಿಗಳು ನಾಮಪತ್ರ ಸ್ವೀಕರಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು