ಶುಕ್ರವಾರ, ಏಪ್ರಿಲ್ 10, 2020
19 °C

ಬೆಳಗಾವಿ| ವಿದ್ಯಾರ್ಥಿಗಳಲ್ಲದಿದ್ದರೂ ಪಾಸ್ ಪಡೆದಿದ್ದ 21 ಮಂದಿ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ವಿದ್ಯಾರ್ಥಿಗಳಿಗೆ ನೀಡುವ ಬಸ್‌ ಪಾಸ್‌ ಪಡೆದು ಪ್ರಯಾಣಿಸಿ ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ₹ 4.38 ಲಕ್ಷ ನಷ್ಟ ಉಂಟು ಮಾಡಿರುವ 21 ಮಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾರಿಗೆ ಅಧಿಕಾರಿಗಳು ಇಲ್ಲಿನ ಮಾರ್ಕೆಟ್‌ ಠಾಣೆಗೆ ಗುರುವಾರ ದೂರು ನೀಡಿದ್ದಾರೆ.

ಜುಲೈನಲ್ಲಿ ವಿದ್ಯಾರ್ಥಿಗಳಿಗೆ ಪಾಸ್‌ ನೀಡಲಾಗುತ್ತದೆ. ಆ ವೇಳೆಯಲ್ಲಿ ಅವರು ನಕಲಿ ದಾಖಲೆಗಳನ್ನು ಕೊಟ್ಟು ಪಾಸ್ ಪಡೆದಿರುವುದು ಗೊತ್ತಾಗಿದೆ. ಭದ್ರತಾ ಹಾಗೂ ಜಾಗೃತ ವಿಭಾಗದ ಅಧಿಕಾರಿಗಳು ಈಚೆಗೆ ಬಸ್‌ಗಳಲ್ಲಿ ಪ್ರಯಾಣಿಕರ ಟಿಕೆಟ್‌ ಪರಿಶೀಲಿಸುವ ವೇಳೆ ಇಬ್ಬರು ವಿದ್ಯಾರ್ಥಿಗಳಲ್ಲದವರು ವಿದ್ಯಾರ್ಥಿಗಳಿಗೆ ನೀಡುವ ಪಾಸ್ ಪಡೆದಿರುವುದು ಗೊತ್ತಾಗಿತ್ತು. ಈ ಪ್ರಕರಣದ ಬೆನ್ನು ಹತ್ತಿದ ಅಧಿಕಾರಿಗಳು ಒಟ್ಟು 21 ಮಂದಿ ನಿಗಮಕ್ಕೆ ವಂಚಿಸಿರುವುದನ್ನು ಪತ್ತೆ ಹಚ್ಚಿದ್ದಾರೆ.

ದಾಖಲೆಗಳು ಸರಿ ಇಲ್ಲದಿದ್ದರೂ ಪಾಸ್‌ಗಳನ್ನು ವಿತರಣೆ ಮಾಡಿದ್ದು ಹೇಗೆ ಎನ್ನುವ ಬಗ್ಗೆಯೂ ನಿಗಮದಲ್ಲಿ ಆಂತರಿಕವಾಗಿ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

‘ನಿಗಮದ ಅಧಿಕಾರಿಗಳು ನೀಡಿರುವ ದೂರು ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ತಿಳಿಸಿದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು