ಗುರುವಾರ , ಡಿಸೆಂಬರ್ 3, 2020
24 °C

ಬೆಳಗಾವಿ| ಬೆಳೆ ಸಮೀಕ್ಷೆ: ಆಕ್ಷೇಪಣೆ ಆಹ್ವಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯ ಪೂರ್ಣಗೊಂಡಿದೆ. ರೈತರು ಅಥವಾ ಅವರ ಕುಟುಂಬದ ಸದಸ್ಯರು, ಸಂಬಂಧಿಕರು, ಖಾಸಗಿ ನಿವಾಸಿಗಳು (ಪಿಆರ್) ನಮೂದಿಸಿರುವ ವಿವರಗಳು ತಪ್ಪಾಗಿರುವುದು ಕಂಡುಬಂದಲ್ಲಿ ಆಕ್ಷೇಪಣೆಗಳನ್ನು ಬೆಳೆ ದರ್ಶಕ ಮೊಬೈಲ್ ಆ್ಯಪ್‌ನಲ್ಲಿ ಸಲ್ಲಿಸಲು ಅವಕಾಶ ಅವಕಾಶ ಕಲ್ಪಿಸಲಾಗಿದೆ’ ಎಂದು ಜಂಟಿ ಕೃಷಿ ನಿರ್ದೇಶಕ ಶಿವನಗೌಡ ಪಾಟೀಲ ತಿಳಿಸಿದ್ದಾರೆ.

‘ರೈತರು ಅಥವಾ ಪರವಾಗಿ ಕುಟುಂಬದವರು ಸ್ಮಾರ್ಟ್‌ ಫೋನ್‌ನಲ್ಲಿ ಬೆಳೆ ದರ್ಶಕ ಆ್ಯಪ್‌ ಅನ್ನು ಗೂಗಲ್‌ನ ಪ್ಲೇ ಸ್ಟೋರ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬೇಕು. ಅದರಲ್ಲಿ, ತಮ್ಮ ಜಮೀನಿನ ಬೆಳೆಗಳ ಮಾಹಿತಿ ದಾಖಲಾಗಿರುವುದನ್ನು ಛಾಯಾಚಿತ್ರ ಸಮೇತ ವೀಕ್ಷಿಸಬಹುದು. ಜೊತೆಗೆ ಬೆಳೆ, ಸರ್ವೆ  ನಂಬರ್, ವಿಸ್ತೀರ್ಣ, ಬೆಳೆ ಸಮೀಕ್ಷೆ ಮಾಡಿದವರ ವಿವರಗಳ ಬಗ್ಗೆ ಏನಾದರೂ ಆಕ್ಷೇಪಣೆ ಇದ್ದರೆ ಅತ್ಯಂತ ಸುಲಭವಾಗಿ ಸಲ್ಲಿಸಬಹುದು’ ಎಂದು ಮಾಹಿತಿ ನೀಡಿದ್ದಾರೆ.

‘ಆಕ್ಷೇಪಣೆ ಇದ್ದಲ್ಲಿ ಸಲ್ಲಿಸಲು ನ.16ರವರೆಗೆ ಕಾಲಾವಕಾಶ ನೀಡಲಾಗಿದೆ. ಸಮೀಕ್ಷೆಯಲ್ಲಿ ಸಂಗ್ರಹಿಸಿರುವ ಮಾಹಿತಿಯನ್ನು ವಿಮೆ ಹಾಗೂ ಹಾನಿ ಪರಿಹಾರ ನೀಡುವಾಗ ಪರಿಗಣಿಸಲಾಗುವುದು. ಕನಿಷ್ಠ ಬೆಂಬಲ ಬೆಲೆ ಯೋಜನೆ (ಎಂ.ಎಸ್.ಪಿ) ಹಾಗೂ ಇತರ ಸರ್ಕಾರದ ಸಹಾಯಧನ ನೀಡುವ ಯೋಜನೆಗಳಿಗೆ ಬಳಸಿಕೊಳ್ಳಲಾಗುವುದು’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.