ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳೆ ಸಮೀಕ್ಷೆ: ಆಕ್ಷೇಪಣೆಗೆ ಆಹ್ವಾನ

Last Updated 24 ಸೆಪ್ಟೆಂಬರ್ 2020, 10:32 IST
ಅಕ್ಷರ ಗಾತ್ರ

ಬೆಳಗಾವಿ: ‘ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಮೊಬೈಲ್ ಆ್ಯಪ್‌ ಬಳಸಿ ಬೆಳೆ ಸಮೀಕ್ಷೆ ಆರಂಭಿಸಲಾಗಿದ್ದು, ಕಂದಾಯ, ಕೃಷಿ, ತೋಟಗಾರಿಕೆ, ರೇಷ್ಮೆ ಹಾಗೂ ಸಾಂಖ್ಯಿಕ ಇಲಾಖೆ ಸಹಯೋಗದಲ್ಲಿ ಪ್ರಗತಿಯಲ್ಲಿದೆ. ಈಗಾಗಲೇ ನಮೂದಿಸಿರುವ ವಿವರಗಳು ತಪ್ಪಾಗಿರುವುದು ಕಂಡುಬಂದಲ್ಲಿ ಆಕ್ಷೇಪಣೆಗಳನ್ನು ರೈತರು ‘ಬೆಳೆ ದರ್ಶಕ’ ಮೊಬೈಲ್ ಫೋನ್‌ ಆ್ಯಪ್ ಬಳಸಿ ಸಲ್ಲಿಸಬಹುದು’ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ ತಿಳಿಸಿದ್ದಾರೆ.

‘ಆ್ಯಪ್‌ ಅನ್ನು ಗೂಗಲ್‌ನ ಪ್ಲೇಸ್ಟೋರ್‌ನಿಂದ ಡೌನಲೋಡ್ ಮಾಡಿಕೊಳ್ಳಬೇಕು. ಅದರಲ್ಲಿ, ಬೆಳೆಗಳ ಮಾಹಿತಿ ದಾಖಲಾಗಿರುವುದನ್ನು ಛಾಯಾಚಿತ್ರ ಸಮೇತ ವೀಕ್ಷಿಸಬಹುದು. ಬೆಳೆ, ಸರ್ವೇ ನಂಬರ್, ವಿಸ್ತೀರ್ಣ, ಬೆಳೆ ಸಮೀಕ್ಷೆ ಮಾಡಿರುವವರ ವಿವರಗಳನ್ನು ಪರಿಶೀಲಿಸಲು ಅವಕಾಶದೆ. ಆಕ್ಷೇಪಣೆ ದಾಖಲಿಸಲು ಅ.15ರ ಕೊನೆಯ ದಿನವಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT